ಬಿಜೆಪಿ ರಾಜ್ಯ ಮಾಜಿ ಕಾರ್ಯದರ್ಶಿ ಹಾಗೂ ಯುವ ನಾಯಕ ಜಗದೀಶ ಹಿರೇಮನಿ ಅವರ ಅಕಾಲಿಕ ನಿಧನಕ್ಕೆ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ದಲ್ಲಿ ಹಿರೇಮನಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಅರವಿಂದ ಲಿಂಬಾವಳಿ ಸೇರಿದಂತೆ ಹಲವು ಪ್ರಮುಖ ನಾಯಕರು ಶ್ರದ್ಧಾಂಜಲಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಗದೀಶ ಶೆಟ್ಟರ್ ಅವರು, “ಎಬಿವಿಪಿ ಪೂರ್ಣಾವಧಿ ಕಾರ್ಯಕರ್ತರಾಗಿ, ಕೇಂದ್ರ ಸಪಾಯಿ ಕರ್ಮಚಾರಿ ಆಯೋಗದ ಸದಸ್ಯರಾಗಿ ಹಾಗೂ ಪಕ್ಷದ ಸಂಘಟನೆಯಲ್ಲಿ ಹಿರೇಮನಿ ಅವರ ಸೇವೆ ಅಪಾರವಾದುದು; ಅವರ ನಿಧನದಿಂದ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ,” ಎಂದು ಕಂಬನಿ ಮಿಡಿದಿದ್ದಲ್ಲದೆ, ಮೃತರ ಕುಟುಂಬಕ್ಕೆ ಈ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸಿದರು.

