Khanapur

ಮಳೆಯ ಅಬ್ಬರಕ್ಕೆ ನಲುಗಿದ ಜಾಂಬೇಗಾಳಿ: ಸಂತ್ರಸ್ತರ ನೆರವಿಗೆ ಧಾವಿಸಿದ ಮಾಜಿ ಶಾಸಕ ಅರವಿಂದ ಪಾಟೀಲ!

Share

ಖಾನಾಪುರ ತಾಲೂಕಿನ ಜಾಂಬೇಗಾಳಿ ಹಾಗೂ ದೇವರಾಯಿ ಭಾಗದಲ್ಲಿ ಸುರಿದ ಭಾರಿ ಗಾಳಿ-ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಮರಗಳು ಧರೆಗುರುಳಿ ಮನೆಗಳಿಗೆ ಹಾನಿಯಾಗಿರುವ ಪ್ರದೇಶಗಳಿಗೆ ಇಂದು ಮಾಜಿ ಶಾಸಕ ಅರವಿಂದ ಪಾಟೀಲ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಖಾನಾಪುರ ತಾಲೂಕಿನಾದ್ಯಂತ ವರುಣನ ಅಬ್ಬರ ಮುಂದುವರಿದಿದ್ದು, ಜಾಂಬೇಗಾಳಿ ಮತ್ತು ದೇವರಾಯಿ ಗ್ರಾಮಗಳಲ್ಲಿ ಭಾರಿ ಪ್ರಮಾಣದ ಆಸ್ತಿಪಾಸ್ತಿ ಹಾನಿ ಸಂಭವಿಸಿದೆ. ನಿನ್ನೆ ರಾತ್ರಿ ಬೀಸಿದ ಗಾಳಿ-ಮಳೆಗೆ ಬೃಹತ್ ಮರಗಳು ಉರುಳಿಬಿದ್ದ ಪರಿಣಾಮ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಹಲವು ಮನೆಗಳ ಮೇಲ್ಛಾವಣಿ ಹಾರಿಹೋಗಿವೆ. ಘಟನಾ ಸ್ಥಳಕ್ಕೆ ಮಾಜಿ ಶಾಸಕ ಹಾಗೂ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಅರವಿಂದ ಪಾಟೀಲ ಅವರು, ಟಿಎಪಿಸಿಎಂಎಸ್ ನಿರ್ದೇಶಕ ರಫೀಕ್ ಹಲಸಿಕರ ಅವರೊಂದಿಗೆ ಭೇಟಿ ನೀಡಿ ಹಾನಿಯನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿದ ಅವರು, ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಕೂಡಲೇ ಸರ್ಕಾರದ ವತಿಯಿಂದ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಮಳೆ ಹಾನಿಯಿಂದ ತತ್ತರಿಸಿದ ಜನರಿಗೆ ಶೀಘ್ರವಾಗಿ ಮೂಲಭೂತ ಸೌಕರ್ಯ ಒದಗಿಸಲು ಅವರು ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.

Tags:

error: Content is protected !!