ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ತಮ್ಮ ಸಿದ್ಧಸಿರಿ ಸಂಸ್ಥೆಯ ಮೂಲಕ ಸಿಬ್ಬಂದಿಗಳನ್ನು ಬಳಸಿಕೊಂಡು ಮತದಾರರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ವಿಜಯಪುರದಲ್ಲಿ ಭಾನುವಾರದಂದು ಕಾಂಗ್ರೆಸ್ ಮುಖಂಡ ಎಂ.ಸಿ. ಮುಲ್ಲಾ ಅವರು ಮಾಧ್ಯಮಗೋಷ್ಠಿಯಲ್ಲಿ ಆರೋಪಿಸಿದರು. ಸಿದ್ದಸಿರಿ ಸಂಸ್ಥೆಯ ಸಿಬ್ಬಂದಿಗಳು ಈಗಾಗಲೇ ನಗರದ ವಿವಿಧ ಬಡಾವಣೆಗಳಲ್ಲಿ ಸಂಚರಿಸಿ ಮತದಾರರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಅವರು ತಿಳಿಸಿದರು.

