Bagalkot

ಸಚಿವ ಸ್ಥಾನಕ್ಕಾಗಿ ಕಾಶಪ್ಪನವರ ಅಭಿಮಾನಿಗಳ ಹರಕೆ: ಶ್ರೀಶೈಲ ಮಲ್ಲಿಕಾರ್ಜುನನಿಗೆ ವಿಶೇಷ ಪೂಜೆ!

Share

ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ಪುನರ್ ರಚನೆಯ ಸದ್ದು ಜೋರಾಗ ಬೆನ್ನಲ್ಲೇ, ಬಾಗಲಕೋಟೆ ಜಿಲ್ಲೆಯ ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂಬ ಆಗ್ರಹ ತೀವ್ರಗೊಂಡಿದೆ. ಇದಕ್ಕಾಗಿ ಅವರ ಅಭಿಮಾನಿಗಳು ಇತಿಹಾಸ ಪ್ರಸಿದ್ಧ ಪುಣ್ಯಕ್ಷೇತ್ರದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.

ರಾಜ್ಯ ಸಚಿವ ಸಂಪುಟ ಪುನರ್ ರಚನೆ ವಿಚಾರ ಮುಂಚೂಣಿಗೆ ಬರುತ್ತಿದ್ದಂತೆ, ಹುನಗುಂದ ಕ್ಷೇತ್ರದ ಜನಪ್ರಿಯ ಶಾಸಕ ವಿಜಯಾನಂದ ಕಾಶಪ್ಪನವರ್ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಒತ್ತಾಯಿಸಿ ಅವರ ಅಭಿಮಾನಿಗಳು ಭಕ್ತಿಪೂರ್ವಕ ಹರಕೆ ಕೈಗೊಂಡಿದ್ದಾರೆ. ಆಂಧ್ರಪ್ರದೇಶದ ಇತಿಹಾಸ ಪ್ರಸಿದ್ಧ ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಅಭಿಮಾನಿ ಬಳಗವು ವಿಶೇಷ ಪೂಜೆ ಸಲ್ಲಿಸಿ, ಕಾಶಪ್ಪನವರ್ ಅವರಿಗೆ ಸಚಿವ ಪಟ್ಟ ಸಿಗಲೆಂದು ಪ್ರಾರ್ಥಿಸಿದೆ. ಇತ್ತ ಇಳಕಲ್ ನಗರದ ಕಿಲ್ಲಾಗಲ್ಲಿಯಲ್ಲೂ ವಿಜಯಾನಂದ ಕಾಶಪ್ಪನವರ ನೇತೃತ್ವದಲ್ಲಿ ವಿಶೇಷ ಪೂಜೆ ನೆರವೇರಿತು. ಈ ಸಂದರ್ಭದಲ್ಲಿ ನೆರೆದಿದ್ದ ನೂರಾರು ಅಭಿಮಾನಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಒತ್ತಾಯಿಸುವ ಮೂಲಕ, ಕಾಶಪ್ಪನವರ್ ಅವರಿಗೆ ತಕ್ಷಣವೇ ಸಚಿವ ಸ್ಥಾನ ನೀಡಬೇಕೆಂದು ಜೈಕಾರ ಹಾಕಿ ತಮ್ಮ ತೀವ್ರ ಆಗ್ರಹವನ್ನು ವ್ಯಕ್ತಪಡಿಸಿದ್ದಾರೆ.

Tags:

error: Content is protected !!