• ಕಿತ್ತೂರಿನಲ್ಲಿ ನೂತನ ಬಸ್ ಘಟಕ ಲೋಕಾರ್ಪಣೆ
• ಸಚಿವ ರಾಮಲಿಂಗಾ ರೆಡ್ಡಿ ಅವರಿಂದ ಚಾಲನೆ
• 5.27 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಘಟಕ
• ಕಿತ್ತೂರು ನಾಡಿಗೆ 15 ಹೊಸ ಬಸ್ಗಳು

ಕಿತ್ತೂರು ಭಾಗದ ಜನರ ದಶಕಗಳ ಕನಸು ಇಂದು ನನಸಾಗಿದೆ. ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವತಿಯಿಂದ ನಿರ್ಮಿಸಲಾದ ನೂತನ ಬಸ್ ಘಟಕವನ್ನು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಇಂದು ಲೋಕಾರ್ಪಣೆಗೊಳಿಸಿದ್ದಾರೆ.

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬೆಳಗಾವಿ ವಿಭಾಗದ ವತಿಯಿಂದ ಚನ್ನಮ್ಮನ ಕಿತ್ತೂರು ನೂತನ ಬಸ್ ಘಟಕವನ್ನು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಉದ್ಘಾಟಿಸಿದರು. ಕಿತ್ತೂರು ಶಾಸಕ ಬಾಬಾಸಾಹೇಬ್ ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ನಡೆಯಿತು. ಇದಕ್ಕೂ ಮೊದಲೂ ನೂತನ ಕಿತ್ತೂರು ಡಿಪೋಗೆ ಮಂಜೂರಾದ 15 ಬಸ್’ಗಳನ್ನು ಗಣ್ಯರು ಲೋಕಾರ್ಪಣೆಗೊಳಿಸಿದರು. ನಂತರ ವೇದಿಕೆ ಕಾರ್ಯಕ್ರಮಕ್ಕೆ ದೀಪ ಬೆಳಗಿಸುವ ಮೂಲಕ ಚಾಲನೆಯನ್ನು ನೀಡಲಾಯಿತು.
ಈ ವೇಳೆ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು, ಬಹುದಿನಗಳ ಬೇಡಿಕೆ ಈಡೇರಿಸಲಾಗಿದೆ. ಕಿತ್ತೂರಿನಲ್ಲಿ 5 ಕೋಟಿ 27 ಲಕ್ಷದಡಿ ನೂತನ ಬಸ್ ಘಟಕವನ್ನು ನಿರ್ಮಿಸಲಾಗಿದೆ. ಎಲ್ಲ ಜಿಲ್ಲೆಗಳ ಬಸ್ ನಿಲ್ದಾಣಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಅಲ್ಲದೇ ಹೊಸ ಬಸ್ಸುಗಳನ್ನು ನೀಡಲಾಗುತ್ತಿದೆ. ನೇಮಕಾತಿ ಪ್ರಕ್ರಿಯೆ ಕೂಡ ಪ್ರಗತಿಪಥದಲ್ಲಿದೆ ಎಂದರು.
ಇನ್ನು ಕಿತ್ತೂರು ಶಾಸಕ ಬಾಬಾಸಾಹೇಬ್ ಪಾಟೀಲ್ ಅವರು ಈ ಭಾಗದ ಜನರ ಬಹುದಿನಗಳ ಬೇಡಿಕೆ ಈಡೇರಿದೆ. ಕಿತ್ತೂರಿಗೆ ಹೊಸ ಬಸ್ ಘಟಕ ನೀಡುವುದರೊಂದಿಗೆ 15 ಹೊಸ ಬಸ್ಸುಗಳನ್ನು ಲೋಕಾರ್ಪಣೆಗೊಳಿಸಲಾಗಿದೆ. ಐತಿಹಾಸಿಕ ಕಿತ್ತೂರು ನಾಡಿಗೆ ಸಾವಿರಾರು ಭಕ್ತರು ಪ್ರತಿದಿನ ಭೇಟಿ ನೀಡುತ್ತಿದ್ದು, ಇದು ಅವರಿಗೆ ಅನುಕೂಲಕರವಾಗಿದೆ. ಇನ್ನಷ್ಟು ಬಸ್’ಗಳ ಬೇಡಿಕೆಯನ್ನು ಇಡಲಾಗಿದ್ದು, ಅದನ್ನೂ ಕೂಡ ನೀಡುವ ಭರವಸೆಯನ್ನು ಸಚಿವರು ನೀಡಿದ್ದಾರೆಂದು ಕೃತಜ್ಞತೆಗಳನ್ನು ಸಲ್ಲಿಸಿದರು.
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಉಪಾಧ್ಯಕ್ಷ ಸುನೀಲ್ ಹಣುಮಣ್ಣವರ, ಸರ್ಕಾರದ ಕಾರ್ಯದರ್ಶಿ ಡಾ. ಎನ್.ವಿ ಪ್ರಸಾದ, ಎಸ್.ಬಿ.ಶೆಟ್ಟೆಣ್ಣವರ ಸೇರಿದಂತೆ ಇನ್ನುಳಿದವರು ಉಪಸ್ಥಿತರಿದ್ಧರು.
