ಕನ್ನಡ ನೆಲ, ಜಲ ಹಾಗೂ ಭಾಷೆಯ ಹಿತರಕ್ಷಣೆಗಾಗಿ ಹೋರಾಡಿದ ಕನ್ನಡಪರ ಹೋರಾಟಗಾರರ ಮೇಲಿನ ಮೊಕದ್ದಮೆಗಳನ್ನು ಕೂಡಲೇ ವಾಪಸ್ ಪಡೆಯಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಟಿ.ಎ. ನಾರಾಯಣಗೌಡ ಬಣ) ಸರ್ಕಾರವನ್ನು ಆಗ್ರಹಿಸಿದೆ.

ಈ ಕುರಿತು ಬೆಳಗಾವಿಯಲ್ಲಿ ಮಾತನಾಡಿದ ಜಿಲ್ಲಾಧ್ಯಕ್ಷ ದೀಪಕ್ ಗುಡಗನಟ್ಟಿ ಅವರು ಸರ್ಕಾರದ ವಿಳಂಬ ನೀತಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ರಾಜ್ಯದಲ್ಲಿ ಕನ್ನಡದ ಅಸ್ಮಿತೆಗಾಗಿ ಹೋರಾಟ ನಡೆಸಿದ ಕಾರ್ಯಕರ್ತರ ಮೇಲೆ ವಿವಿಧ ಪ್ರಕರಣಗಳು ದಾಖಲಾಗಿದ್ದು, ಇದರಿಂದ ಹೋರಾಟಗಾರರು ಪ್ರತಿನಿತ್ಯ ನ್ಯಾಯಾಲಯಗಳಿಗೆ ಅಲೆಯುವಂತಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೆಂಗಳೂರಿನ ಗಣರಾಜ್ಯೋತ್ಸವ ಹಾಗೂ ಬೆಳಗಾವಿಯ ಸುವರ್ಣಸೌಧದ ಮುಂಭಾಗದ ಭುವನೇಶ್ವರಿ ದೇವಿ ಪ್ರತಿಮೆ ಅನಾವರಣದ ವೇಳೆ ಈ ಪ್ರಕರಣಗಳನ್ನು ವಾಪಸ್ ಪಡೆಯುವುದಾಗಿ ಭರವಸೆ ನೀಡಿದ್ದರು. ಆದರೆ ಈ ಭರವಸೆ ಇನ್ನೂ ಈಡೇರಿಲ್ಲ ಎಂದು ಕರವೇ ಜಿಲ್ಲಾಧ್ಯಕ್ಷ ದೀಪಕ್ ಗುಡಗನಟ್ಟಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಗೃಹ ಸಚಿವರಿಗೆ ಮನವಿ ಮಾಡಿದಾಗ, ಸಂಪುಟ ಸಭೆಯಲ್ಲಿ ಚರ್ಚಿಸಿ 2-3 ತಿಂಗಳಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಹೀಗಾಗಿ ಸರ್ಕಾರ ವಿಳಂಬ ಮಾಡದೇ ತಕ್ಷಣವೇ ಹೋರಾಟಗಾರರ ಮೇಲಿನ ಕೇಸ್ಗಳನ್ನು ಕೈಬಿಡಬೇಕು ಎಂದು ಅವರು ಆಗ್ರಹಿಸಿದರು. BYTE
