ವಿಜಯಪುರ ನಗರದ ಸಂಗ್ಲೀಕಾರ ಲೇಔಟ್‌ನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ತಲೆಗೆ ಕಲ್ಲಿನಿಂದ ಹೊಡೆದು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಮಾಹಿತಿ ತಿಳಿದು ಎಪಿಎಂಸಿ ಪೊಲೀಸ್ ಠಾಣೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶವವನ್ನು ಮರಣೋತ್ತರ ಪರೀಕ್ಷೆಗೆ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಪ್ರಕರಣ ಸಂಬಂಧ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

