ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿಗೆ ಕಾಲುವೆಗಳ ಮೂಲಕ ನೀರು ಹರಿಸುವಂತೆ ಶಾಸಕ ಅಪ್ಪಾಜಿ ನಾಡಗೌಡ ಪಾಟೀಲ್ ಕೃಷ್ಣ ಜಲ ನಿಗಮದ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ಸೂಚನೆ ನೀಡಿದ್ದಾರೆ. ಬೇಸಿಗೆಯಲ್ಲಿ ಜನಜಾನುವಾರುಗಳಿಗೆ ಕುಡಿಯುವ ನೀರಿಲ್ಲದೆ ತೊಂದರೆಯಾಗುತ್ತಿದ್ದು, ಎರಡು ದಿನಗಳಲ್ಲಿ ಚಿಮ್ಮಲಗಿ ಏತ ನೀರಾವರಿ ಕಾಲುವೆಯ ಮೂಲಕ ನೀರು ಹರಿಸುವಂತೆ ಸೂಚಿಸಿದರು.

