ವಿಜಯಪುರ ಜಿಲ್ಲೆಯ ಇಂಡಿ ಮತಕ್ಷೇತ್ರದ ಶಾಸಕ ಯಶವಂತರಾಯ ಗೌಡ ಪಾಟೀಲ್ ಅವರು ದಲಿತ ಸಮಾಜಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಿ ದಲಿತ ಮುಖಂಡ ಜಿತೇಂದ್ರ ಕಾಂಬಳೆ ಅವರು ಭಾನುವಾರ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.


ಇಂಡಿ ಮತಕ್ಷೇತ್ರದ ಬಾಲಕಿಯೊಬ್ಬಳು ಅನಾರೋಗ್ಯ ದಿಂದ ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲಿ ಕುಟುಂಬಸ್ಥರು ಸಹಾಯಕ್ಕಾಗಿ ಮನವಿ ಮಾಡಿದ್ದರು. ಈ ವೇಳೆ ಶಾಸಕ ಯಶವಂತರಾಯಗೌಡ ಪಾಟೀಲ್ ಅವರು ಬಾಲಕಿಯ ತಂದೆ-ತಾಯಿಗೆ ಅವಮಾನ ಮಾಡುವ ರೀತಿಯಲ್ಲಿ ವರ್ತಿಸಿದ್ದಾರೆ ಎಂದು ಜಿತೇಂದ್ರ ಕಾಂಬಳೆ ಆರೋಪಿಸಿದರು. ದಲಿತ ಸಮಾಜದವರ ಸಮಸ್ಯೆಗಳಿಗೆ ಸ್ಪಂದಿಸುವ ಬದಲು ಅವಮಾನ ಮಾಡುವ ಕೆಲಸ ನಡೆಯುತ್ತಿದೆ. ಇದರಿಂದ ಸಮಾಜದ ಜನರಲ್ಲಿ ಅಸಮಾಧಾನ ಉಂಟಾಗಿದೆ ಎಂದು ಅವರು ಹೇಳಿದರು. ಶಾಸಕರು ಸಾರ್ವಜನಿಕರೊಂದಿಗೆ ಗೌರವಯುತವಾಗಿ ನಡೆದುಕೊಳ್ಳಬೇಕು. ದಲಿತ ಸಮುದಾಯದ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ರೀತಿಯ ವರ್ತನೆ ಸರಿಯಲ್ಲ ಎಂದು ಅವರು ಎಚ್ಚರಿಸಿದರು. ಈ ಸಂದರ್ಭದಲ್ಲಿ ದಲಿತ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

