ವಿಜಯಪುರ ನಗರದ ಬಿಜ್ಜರಗಿ ಪೆಟ್ರೋಲ್ ಬಂಕ್ನಲ್ಲಿ ಗುರುವಾರ ರಾತ್ರಿ ಸಂಭವಿಸಿದ ಘಟನೆಯಲ್ಲಿ, ಪೆಟ್ರೋಲ್ ತುಂಬಿಕೊಂಡು ಹೊರಬರುತ್ತಿದ್ದ ಕಾರಿಗೆ, ಮತ್ತೊಂದು ಪೆಟ್ರೋಲ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಮತ್ತು ಪ್ರಯಾಣಿಕರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನಾ ಸ್ಥಳಕ್ಕೆ ಗಾಂಧಿ ಚೌಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

