Chikkodi

ವಾರದ ಸಂತೆಯಲ್ಲಿ ಕೈಚಳಕ ತೋರಿಸಲು ಬಂದ ಖತರ್ನಾಕ್ ಕಳ್ಳರ ಗ್ಯಾಂಗ್’ನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು

Share

ವಾರದ ಸಂತೆಯಲ್ಲಿ ಕಳ್ಳತನಕ್ಕೆ ಬಂದಿದ್ದ ಕಳ್ಳರ ಗ್ಯಾಂಗ್ ಅನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಶಮನೆವಾಡಿ ಗ್ರಾಮದಲ್ಲಿ ನಡೆದಿದೆ.

ಶಮನೆವಾಡಿ ಗ್ರಾಮದಲ್ಲಿ ನಡೆದ ವಾರದ ಸಂತೆಯಲ್ಲಿ ಜನಸಂದಣಿಯನ್ನು ದುರುಪಯೋಗಪಡಿಸಿಕೊಂಡು ನೀಟ್ ಪಾಕೆಟ್ ಹಾಗೂ ಸರಗಳ್ಳತನ ಮಾಡಲು ಯತ್ನಿಸುತ್ತಿದ್ದ ಐವರು ಆರೋಪಿಗಳನ್ನು ಸ್ಥಳೀಯರು ಅನುಮಾನಾಸ್ಪದವಾಗಿ ಗಮನಿಸಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಬಂಧಿತರನ್ನು ಸುಜಾತಾ ಚೌಗಲಾ, ವನಿತಾ ರಾಕ್ ಪಸಾರೆ, ಸಾರಿಕಾ ಸಕಟ, ಜ್ಯೋತಿ ಹಾತಲಗೆ ಹಾಗೂ ನಾಮದೇವ ರಾಕಪಸಾರೆ ಎಂದು ಗುರುತಿಸಲಾಗಿದೆ. ಐವರ ಪೈಕಿ ನಾಲ್ವರು ಮಹಾರಾಷ್ಟ್ರ ಮೂಲದವರಾಗಿದ್ದಾರೆ ಎಂದು ತಿಳಿದುಬಂದಿದೆ.
ಸಂತೆಯಲ್ಲಿ ಕಳ್ಳತನ ನಡೆಸಲು ಯತ್ನಿಸುತ್ತಿದ್ದ ವೇಳೆ ಸಾರ್ವಜನಿಕರು ತಕ್ಷಣ ಎಚ್ಚೆತ್ತು ಆರೋಪಿಗಳನ್ನು ಸೆರೆ ಹಿಡಿದು ಸದಲಗಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕೆ ಬಂದ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದರು.ಸದಲಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:

error: Content is protected !!