hubbali

ಧಾರವಾಡದ ಕವಲಗೇರಿ ಗ್ರಾಮದಲ್ಲಿ ಸಿಡಿಲು ಬೆಇದು ಮಹಿಳೆ ಸಾವು, ಪತಿಗೆ ಗಾಯ.

Share

ಹೋಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ದಂಪತಿಗಳಿಗೆ ಒಣ ಸಿಡಿಲು ಬಡೆದು ಮಹಿಳೆ ಸಾವನ್ನಪ್ಪಿರುವ ಘಟನೆ ಧಾರವಾಡ ತಾಲೂಕಿನ ಕವಲಗೇರಿ ಗ್ರಾಮದಲ್ಲಿ ನಡೆದಿದೆ. ಕವಲಗೇರಿ ಗ್ರಾಮದ ಜಯಶ್ರೀ ಹನುಮಂತಪ್ಪ ಶಿರಸಂಗಿ ಸಾವನ್ನಪ್ಪಿದ ಮಹಿಳೆ ಎಂದು ತಿಳಿದುಬಂದಿದೆ. ಗುತ್ತಿಗೆ ಆಧಾರದಲ್ಲಿ ಉಳುಮೆ ಮಾಡುತ್ತಿರುವ ಹೊಲದಲ್ಲಿ ದಂಪತಿಗಳು ಮೆಂತ್ಯೆ ಕೀಳುವ ಸಂದರ್ಭದಲ್ಲಿ ಸಿಡಿಲು ಬಡೆದು ಜಯಶ್ರೀ ಹಾಗೂ ಆಕೆಯ ಪತಿ ಹನುಮಂತಪ್ಪ ಗಾಯಗೊಂಡಿದ್ದಾರೆ. ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು, ಆಕೆಯ ಪತಿಗೆ ಗಾಯವಾಗಿದೆ. ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಕನಕೂರು ಗ್ರಾಮ ಪಂಚಾಯಿತಿ ಪಿಡಿಒ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Tags:

error: Content is protected !!