• ರಾಮದುರ್ಗದಲ್ಲಿ ಆಶ್ರಯ ಯೋಜನೆ ಕೋಟ್ಯಂತರ ವಂಚನೆ!
• ಕೊಳಗೇರಿ ಅಭಿವೃದ್ಧಿ ಮಂಡಳಿ ಕಚೇರಿಗೆ ದಾಳಿ!
• ಬೋಗಸ್ ದಾಖಲೆ ಸೃಷ್ಟಿಸಿ ಹಣ ದುರ್ಬಳಕೆ!
• ಎಂಜಿನಿಯರ್, ಗುತ್ತಿಗೆದಾರರ ನಿವಾಸಗಳ ಮೇಲೂ ರೇಡ್!
ರಾಮದುರ್ಗ ಪಟ್ಟಣದಲ್ಲಿ 600 ಮನೆಗಳ ನಿರ್ಮಾಣ ಕಾಮಗಾರಿಯಲ್ಲಿ ಬೋಗಸ್ ದಾಖಲೆ ಸೃಷ್ಟಿಸಿ ಕೋಟ್ಯಂತರ ರೂಪಾಯಿ ಹಣ ದುರ್ಬಳಕೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಕೊಳಗೇರಿ ಅಭಿವೃದ್ಧಿ ಮಂಡಳಿಯ ಕಚೇರಿ ಮೇಲೆ ಮಂಗಳವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದರು.

ಸರ್ಕಾರದ ಯೋಜನೆಯಡಿ ಮನೆಗಳನ್ನು ನಿರ್ಮಿಸಲಾಗಿದೆ ಎಂದು ದಾಖಲೆಗಳಲ್ಲಿ ತೋರಿಸಿ ಅನುದಾನ ಬಿಡುಗಡೆ ಮಾಡಿಸಿಕೊಂಡಿದ್ದರೂ, ವಾಸ್ತವದಲ್ಲಿ ಹಲವು ಮನೆಗಳನ್ನು ಫಲಾನುಭವಿಗಳೇ ಸ್ವಂತವಾಗಿ ನಿರ್ಮಿಸಿಕೊಂಡಿರುವುದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎನ್ನಲಾಗಿದೆ. ಈ ಮೂಲಕ ಕೋಟ್ಯಂತರ ರೂಪಾಯಿ ವಂಚನೆ ನಡೆದಿರುವ ಶಂಕೆ ವ್ಯಕ್ತವಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಗುತ್ತಿಗೆದಾರ ಹಾಗೂ ಸಹಾಯಕ ಕಾರ್ಯಾಭಿಯಂತರರ ಕಚೇರಿ ಮತ್ತು ನಿವಾಸಗಳ ಮೇಲೂ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದರು. ದಾಳಿಯ ವೇಳೆ ಮಹತ್ವದ ದಾಖಲೆಗಳು, ಹಣಕಾಸು ವ್ಯವಹಾರಗಳ ಮಾಹಿತಿ ಹಾಗೂ ಕಾಮಗಾರಿ ಸಂಬಂಧಿತ ಕಡತಗಳನ್ನು ವಶಕ್ಕೆ ಪಡೆದು ತನಿಖೆ ಮುಂದುವರೆಸಿದ್ದಾರೆ.
ಘಟನೆ ರಾಮದುರ್ಗ ಪಟ್ಟಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಪ್ರಕರಣದಲ್ಲಿ ಇನ್ನಷ್ಟು ಅಧಿಕಾರಿಗಳು ಹಾಗೂ ಮಧ್ಯವರ್ತಿಗಳ ಪಾತ್ರವೂ ಇರುವ ಶಂಕೆ ವ್ಯಕ್ತವಾಗುತ್ತಿದೆ.

