Vijaypura

ಅಂಡ‌ರ್ ಬ್ರಿಡ್ಜ್ ರಸ್ತೆಗಾಗಿ ನಿವಾಸಿಗಳಿಂದ ಪ್ರತಿಭಟನೆ

Share

ವಿಜಯಪುರ ನಗರದ ಹೊರಭಾಗದಲ್ಲಿರುವ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಉಕಮನಾಳ ಗ್ರಾಮಕ್ಕೆ ತೆರಳುವ ರಸ್ತೆಯಲ್ಲಿ ಅಂಡರ್‌ಬ್ರಿಡ್ಜ್ ನಿರ್ಮಾಣ ಮಾಡಬೇಕೆಂದು ಆಗ್ರಹಿಸಿ, ಭಾನುವಾರದಂದು ಬಡಾವಣೆಯ ನಿವಾಸಿಗಳು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್‌ ಪ್ರತಿಭಟನೆ ನಡೆಸಿದರು. ಈ ರಸ್ತೆಯು ಸುಮಾರು 6 ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವುದರಿಂದ, ಕೂಡಲೇ ಅಧಿಕಾರಿಗಳು ಗಮನಹರಿಸಿ ಅಂಡರ್‌ಬ್ರಿಡ್ಜ್ ನಿರ್ಮಾಣ ಮಾಡಿಕೊಡಬೇಕೆಂದು ಅವರು ಮನವಿ ಮಾಡಿದರು.

Tags:

error: Content is protected !!