Dharwad

ಧಾರವಾಡದಲ್ಲಿ ಪ್ರತ್ಯೇಕ ಪಾಲಿಕೆ ಹೋರಾಟ ಕಂಟಿನ್ಯೂ, ಕೈ ಪಾಲಿಕೆ ಸದಸ್ಯರಿಂದ ರಾಜೀನಾಮೆ..

Share

ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ಹೋರಾಟ ಮುಂದುವರೆದಿದ್ದು, 11ನೇ ದಿನಕ್ಕೆ ಕಾಲಿಟ್ಟಿದ್ದು, ಈಗ ಈ ಹೋರಾಟಕ್ಕೆ ಬೆಂಬಲಿಸಿ ಹುಬ್ಬಳ್ಳಿ ಧಾರವಾಡ ಮಾಹಾನಗರ ಪಾಲಿಕೆಯ ಕಾಂಗ್ರೆಸ್‌ನ ಸದಸ್ಯರು ತಮ್ಮ ಪಾಲಿಕೆ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಜ್ಯಪಾಲರ ನಡೆಯ ವಿರುದ್ಧ ಆಕ್ರೋಶ ಹೊರಹಾಕಿದರು.‌

ಹುಬ್ಬಳ್ಳಿ ಧಾರವಾಡ ಮಾಹಾನಗರ ಪಾಲಿಕೆಯ ಧಾರವಾಡ ಕಚೇರಿ ಮುಂಭಾಗದಲ್ಲಿನ ಪ್ರತ್ಯೇಕ ಪಾಲಿಕೆ ಹೋರಾಟ ವೇದಿಕೆಗೆ ಆಗಮಿಸಿದ, ಕಾಂಗ್ರೆಸ್‌ನ 12ಜನ ಪಾಲಿಕೆ ಸದಸ್ಯರು ತಮ್ಮ ರಾಜೀನಾಮೆ ಸಲ್ಲಿಸಿ ಹೋರಾಟಕ್ಕೆ ಇಳಿದಿದ್ದಾರೆ‌. ಈಗಾಗಲೇ ಹಲವು ಸಂಘ ಸಂಸ್ಥೆಗಳು ಪ್ರತ್ಯೇಕ ಹೋರಾಟಕ್ಕೆ ಬೆಂಬಲ ನೀಡಿದ್ದು, ಈಗ ಪಾಲಿಕೆ ಸದಸ್ಯರು ರಾಜೀನಾಮೆ ನೀಡಿ ಹೋರಾಟಕ್ಕೆ ಧುಮುಕ್ಕಿರುವುದು ಮತ್ತಷ್ಟು ಪ್ರತ್ಯೇಕ ಪಾಲಿಕೆಯ ಹೋರಾಟಕ್ಕೆ ಬಲ ಬಂದಂತಾಗಿದೆ.‌ ಜತೆಗೆ ರಾಜ್ಯಪಾಲರು ಧಾರವಾಡ ಪ್ರತ್ಯೇಕ ಪಾಲಿಕೆಗೆ ಅಂಕಿತ ಹಾಕದಿದ್ದಲ್ಲಿ ರಾಜ್ಯಪಾಲರಿಗೆ ಗೋ-ಬ್ಯಾಕ್ ಚಳುವಳಿ ಆರಂಭಿಸುವುದಾಗಿ ಹೋರಾಟಗಾರರು ಎಚ್ಚರಿಕೆ ಕೂಡಾ ನೀಡಿದ್ದಾರೆ.‌

Tags:

error: Content is protected !!