ದೇಶಾದ್ಯಂತ ವಾಣಿಜ್ಯ ಸಿಲಿಂಡರ್ ಬೆಲೆ ಏರಿಕೆಯಾಗ ಬೆನ್ನಲ್ಲೇ ಕೇಂದ್ರ ಸರ್ಕಾರದ ವಿರುದ್ಧ ಡಿಸಿಎಂ ಡಿ.ಕೆ. ಶಿವಕುಮಾರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಚುನಾವಣೆ ಮುಗಿಯುತ್ತಿದ್ದಂತೆಯೇ ಬಿಜೆಪಿ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕುತ್ತಿದೆ ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ.

ರಾಜ್ಯ ಹಾಗೂ ದೇಶಾದ್ಯಂತ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 993 ರೂಪಾಯಿ ಏರಿಕೆಯಾಗಿರುವುದನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರವಾಗಿ ಖಂಡಿಸಿದ್ದಾರೆ. “ಚುನಾವಣೆ ಮುಗಿಯಲಿ ಎಂದು ಕಾದು ಕುಳಿತಿದ್ದ ಬಿಜೆಪಿಗರು, ಈಗ ಅಸಲಿ ಮುಖ ತೋರಿಸುತ್ತಿದ್ದಾರೆ. ಜನಸಾಮಾನ್ಯರು ಮತ್ತು ಕಾರ್ಮಿಕರ ಹಿತದೃಷ್ಟಿ ಬಿಜೆಪಿಗೆ ಇಲ್ಲವೇ ಇಲ್ಲ.

ಬೆಲೆ ಏರಿಕೆಯ ಮೂಲಕ ಜನರ ಬದುಕನ್ನು ದುಸ್ತರಗೊಳಿಸುತ್ತಿರುವ ಕೇಂದ್ರದ ಧೋರಣೆಯ ವಿರುದ್ಧ ನಾವೆಲ್ಲರೂ ದೊಡ್ಡ ಮಟ್ಟದಲ್ಲಿ ಧ್ವನಿ ಎತ್ತಬೇಕಿದೆ,” ಎಂದು ಅವರು ಕಿಡಿಕಾರಿದ್ದಾರೆ.
