State

ಗ್ಯಾಸ್ ದರ ಏರಿಕೆಗೆ ಜಾಗತಿಕ ಬಿಕ್ಕಟ್ಟೇ ಕಾರಣ: ಸಿಎಂ ಸ್ಥಾನ ಉಳಿಸಿಕೊಳ್ಳಲು ಕಾಂಗ್ರೆಸ್ ಗಿಮಿಕ್ ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ!

Share

• ಜಾಗತಿಕ ಬಿಕ್ಕಟ್ಟಿನಿಂದ ಪೆಟ್ರೋಲಿಯಂ ಬೆಲೆ ಏರಿಕೆ
• ಕಾಂಗ್ರೆಸ್ ನಾಯಕರಿಗೆ ಹಳೆಯ ಹೇಳಿಕೆ ನೆನಪಿಸಿದ ಜೋಶಿ
• ರಾಜ್ಯದಲ್ಲಿ ಮೂರು ಬಾರಿ ಪೆಟ್ರೋಲ್ ದರ ಏರಿಕೆ
• ಸಿಎಂ ಸ್ಥಾನ ಉಳಿಸಿಕೊಳ್ಳಲು ಕಾಂಗ್ರೆಸ್ ಗಿಮಿಕ್_

ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆ ವಿಚಾರವಾಗಿ ಸಿಎಂ, ಡಿಸಿಎಂ ಟೀಕೆಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಖಡಕ್ ಉತ್ತರ ನೀಡಿದ್ದಾರೆ. ಬೆಲೆ ಏರಿಕೆಯ ಹಿಂದೆ ಅಂತರಾಷ್ಟ್ರೀಯ ಮಾರುಕಟ್ಟೆಯ ಬಿಕ್ಕಟ್ಟು ಇದೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಚಿತ್ರದುರ್ಗದಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಎಲ್.ಪಿ.ಜಿ ಮತ್ತು ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆಗೆ ಜಾಗತಿಕ ಮಟ್ಟದ ಬಿಕ್ಕಟ್ಟುಗಳೇ ಮೂಲ ಕಾರಣ ಎಂದರು. ಹಿಂದೆ ಕಚ್ಚಾ ತೈಲದ ಬೆಲೆ ಬ್ಯಾರೆಲ್‌ಗೆ 60 ಡಾಲರ್ ಇದ್ದದ್ದು, ಈಗ 126 ಡಾಲರ್‌ಗೆ ತಲುಪಿದೆ. ಇದನ್ನು ಅರಿಯದ ಕಾಂಗ್ರೆಸ್ ನಾಯಕರು ತಮ್ಮ ಹಳೆಯ ಹೇಳಿಕೆಗಳನ್ನು ಒಮ್ಮೆ ನೆನಪಿಸಿಕೊಳ್ಳಲಿ ಎಂದು ಟೀಕಿಸಿದರು.

ಇದೇ ವೇಳೆ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ ಜೋಶಿ, ಕಾಂಗ್ರೆಸ್ ಸರ್ಕಾರ ಈಗಾಗಲೇ ಕರ್ನಾಟಕದಲ್ಲಿ ಮೂರು ಬಾರಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಿಸಿದೆ. ಮುಖ್ಯಮಂತ್ರಿ ಸ್ಥಾನದಲ್ಲಿ ಭದ್ರವಾಗಿ ನೆಲೆಯೂರಲು ಮತ್ತು ಜನರ ಗಮನ ಬೇರೆಡೆ ಸೆಳೆಯಲು ಸಿಎಂ ಸಿದ್ದರಾಮಯ್ಯ ಹಾಗೂ ಸಚಿವರು ಕೇಂದ್ರದ ಮೇಲೆ ಗೂಬೆ ಕೂರಿಸುವ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Tags:

error: Content is protected !!