ವಿಜಯಪುರ ಜಿಲ್ಲೆಯ ಕೊಲ್ಲಾರ ಪಟ್ಟಣದಲ್ಲಿ ಕೆಪಿಎಲ್ ಮಾದರಿ ಕ್ರಿಕೆಟ್ ಪಂದ್ಯಾವಳಿಯ ಫೈನಲ್ ಪಂದ್ಯದ ಗೆಲುವಿನ ಸಂಭ್ರಮಾಚರಣೆ ವೇಳೆ 16ನೇ ವಾರ್ಡ್ ಕಾಂಗ್ರೆಸ್ ಸದಸ್ಯ ತೌಸೀಪ್ ಗಿರಗಾಂವಿ ಎದೆ ನೋವಿನಿಂದ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು, ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಬೇರೆ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ.

