Accident

ಹುಬ್ಬಳ್ಳಿ ಹೊರವಲಯದಲ್ಲಿ ಭೀಕರ ಅಪಘಾತ ಸ್ಥಳದಲ್ಲೇ ಇಬ್ಬರು ದುರ್ಮರಣ

Share

ಮುಂದೆ ಹೋಗುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವಿಗೀಡಾದ ಘಟನೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ತಡ ರಾತ್ರಿ ನಡೆದಿದೆ.

ಹುಬ್ಬಳ್ಳಿಯಿಂದ ಗದಗ ಕಡೆಗೆ ಹಿಟ್ಯಾಚಿ ಹೇರಿಕೊಂಡು ಹೋಗುತ್ತಿದ್ದ ಲಾರಿ ಹಿಂಬದಿಗೆ ಶಿರಗುಪ್ಪಿ ಬಳಿ ಕಾರು ಜೋರಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಕಾರು ಚಾಲಕ ಹಾಗೂ ಇನ್ನೊಬ್ಬ ಸಹ ಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಶವಗಳನ್ನು ಕಿಮ್ಸ್ ಶವಾಗಾರಕ್ಕೆ ರವಾನೆ ಮಾಡಿದ್ದು ಅಪಘಾತದಲ್ಲಿ ಮೃತಪಟ್ಟವರು ಎಲ್ಲಿಯವರು ಎಂಬ ಮಾಹಿತಿ ಕಲೆಹಾಕುತ್ತಿದ್ದಾರೆ.

Tags:

error: Content is protected !!