• ಸಿಂದಗಿಯಲ್ಲಿ ರಸ್ತೆ ಗುಂಡಿಗಳಿಗೆ ವಿಶೇಷ ಪೂಜೆ
• ಕೆಆರ್‌ಎಸ್ ಪಕ್ಷದಿಂದ ವಿನೂತನ ಶೈಲಿ ಪ್ರತಿಭಟನೆ
• ಶಾಸಕ ಅಶೋಕ ಮನಗೂಳಿ ವಿರುದ್ಧ ಆಕ್ರೋಶ
• ರಸ್ತೆ ದುರಸ್ತಿಗೆ ಆಗ್ರಹಿಸಿ ಭರ್ಜರಿ ಘೋಷಣೆ

ಸಾರ್ವಜನಿಕರ ಜೀವದ ಜೊತೆ ಆಟವಾಡುತ್ತಿರುವ ರಸ್ತೆ ಗುಂಡಿಗಳನ್ನು ಮುಚ್ಚಲು ವಿಫಲವಾದ ಆಡಳಿತಕ್ಕೆ ಬುದ್ಧಿ ಕಲಿಸಲು ಸಿಂದಗಿಯಲ್ಲಿ ವಿಭಿನ್ನ ಪ್ರತಿಭಟನೆ ನಡೆದಿದೆ. ರಸ್ತೆ ಮಧ್ಯದ ಗುಂಡಿಗಳಿಗೆ ಪೂಜೆ ಸಲ್ಲಿಸುವ ಮೂಲಕ ಕೆಆರ್‌ಎಸ್ ಪಕ್ಷದ ಕಾರ್ಯಕರ್ತರು ಸರ್ಕಾರದ ಗಮನ ಸೆಳೆದಿದ್ದಾರೆ.

ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ಮುಖ್ಯ ರಸ್ತೆಗಳಲ್ಲಿನ ತಗ್ಗು ಗುಂಡಿಗಳನ್ನು ವಿರೋಧಿಸಿ ಕೆಆರ್‌ಎಸ್ ಪಕ್ಷದ ಮುಖಂಡರು ವಿನೂತನ ಪ್ರತಿಭಟನೆ ನಡೆಸಿದರು. ತಗ್ಗುಗಳಿಗೆ ಅರಿಶಿನ ಕುಂಕುಮ ಹಚ್ಚಿ, ಕಾಯಿ ಒಡೆದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಶಾಸಕ ಅಶೋಕ ಮನಗೂಳಿ ಮೂರು ವರ್ಷಗಳಿಂದ ಗುಂಡಿಗಳನ್ನು ಮುಚ್ಚುವಲ್ಲಿ ವಿಫಲರಾಗಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
