ಬಡ ವಿದ್ಯಾರ್ಥಿಗಳ ವೈದ್ಯಕೀಯ ಕನಸಿಗೆ ಆಸರೆ

ಎಂ.ಬಿ.ಬಿ.ಎಸ್ ಶುಲ್ಕ ಭರಿಸಿದ ಸಚಿವ ಎಂ.ಬಿ.ಪಾಟೀಲ

ಉದಯಕುಮಾರ, ಮನೋಹರ ಶಿಕ್ಷಣಕ್ಕೆ ಭರಪೂರ ನೆರವು
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬಿಎಲ್ಡಿಇ ಸಂಸ್ಥೆ ಸಾಥ್
ಆ್ಯಂಕರ್: ನೀಟ್ ಪಾಸಾಗಿ ಸರಕಾರಿ ಕೋಟಾದಡಿ ಎಂ.ಬಿ.ಬಿ.ಎಸ್. ಸೀಟು ಪಡೆದರೂ ಆರ್ಥಿಕ ಸಮಸ್ಯೆಯಿಂದಾಗಿ ಸಂಕಷ್ಟದಲ್ಲಿದ್ದ ಇಬ್ಬರು ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ ಮತ್ತು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ಹಣಕಾಸು ನೆರವು ನೀಡುವ ಮೂಲಕ ಸಹಾಯ ಹಸ್ತ ಚಾಚಿದ್ದಾರೆ.
ವಿಜಯಪುರ ನಗರದಲ್ಲಿರುವ ತಮ್ಮ ಗೃಹ ಕಚೇರಿಯಲ್ಲಿ ಇಬ್ಬರು ವಿದ್ಯಾರ್ಥಿಗಳಾದ ಆಲಮೇಲದ ವಿದ್ಯಾರ್ಥಿ ಆಲಮೇಲದ ಉದಯಕುಮಾರ ನಾರಾಯಣಕರ ಮತ್ತು ರತ್ನಾಪುರದ ಮನೋಹರ ಹರಗೆ ಅವರ ಎಂ.ಬಿ.ಬಿ.ಎಸ್ ಕೋರ್ಸಿನ ಬೋಧನಾ ಶುಲ್ಕ, ಊಟ ಮತ್ತು ವಸತಿ(ಹಾಸ್ಟೇಲ್ ಮತ್ತು ಮೆಸ್)ಕ್ಕೆ ಅಗತ್ಯವಾಗಿರುವ ಹಣದ ಚೆಕ್ ನ್ನು ಸಚಿವರು ವಿತರಿಸಿದರು. ಬಳಿಕ ಮಾತನಾಡಿದ ಸಚಿವರು, ವಿದ್ಯಾರ್ಥಿಗಳು ಶ್ರಮವಹಿಸಿ, ಶ್ರದ್ಧೆಯಿಂದ ವಿದ್ಯಾಭ್ಯಾಸ ಮಾಡಬೇಕು. ಶಿಕ್ಷಣಕ್ಕೆ ಅಗತ್ಯವಾಗಿರುವ ಆರ್ಥಿಕ ನೆರವನ್ನು ನೀಡಲಾಗುತ್ತಿದ್ದು, ಇದನ್ನು ಸದ್ಬಳಕೆ ಮಾಡಿಕೊಂಡು ಪೋಷಕರು ಮತ್ತು ಬಸವನಾಡು ವಿಜಯಪುರ ಜಿಲ್ಲೆಗೆ ಕೀರ್ತಿ ತರಬೇಕು ಎಂದು ಹೇಳಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ರಜಿಸ್ಟಾರ್ ಡಾ. ಆರ್. ವಿ. ಕುಲಕರ್ಣಿ ಮತ್ತು ಅಕೌಂಟ್ಸ್ ಸುಪರಿಂಟೆಂಡೆಂಟ್ ಎಸ್. ಎಸ್. ಪಾಟೀಲ, ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು.
