• ಸಚಿವ ಡಿ. ಸುಧಾಕರ್ ನಿವಾಸಕ್ಕೆ ಎಂ.ಬಿ. ಪಾಟೀಲ್ ಭೇಟಿ
• ಪಾರ್ಥಿವ ಶರೀರದ ದರ್ಶನ ಪಡೆದು ಪುಷ್ಪ ನಮನ
• ಶೋಕತಪ್ತ ಕುಟುಂಬ ಸದಸ್ಯರಿಗೆ ಸಚಿವರಿಂದ ಸಾಂತ್ವನ
• ಆತ್ಮೀಯ ಒಡನಾಡಿಯ ಕಳೆದುಕೊಂಡ ಎಂ.ಬಿ. ಪಾಟೀಲ್ ಶೋಕ

ಆ್ಯಂಕರ್: ವಿಜಯಪುರ ಜಿಲ್ಲೆಯ ಉಸ್ತುವಾರಿ ಸಚಿವರಾದ ಎಂ.ಬಿ.ಪಾಟೀಲ ಇವರು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಹಾಗೂ ಸಚಿವ ಸಂಪುಟದ ಆತ್ಮೀಯ ಸಹೋದ್ಯೋಗಿಗಳಾಗಿದ್ದ ಡಿ. ಸುಧಾಕರ್ ಅವರ ಬೆಂಗಳೂರಿನ ನಿವಾಸಕ್ಕೆ ತೆರಳಿ, ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಪುಷ್ಪ ನಮನ ಸಲ್ಲಿಸಿದರು. ಇದೇ ವೇಳೆ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ ಶೋಕತಪ್ತ ಕುಟುಂಬದ ದುಃಖದಲ್ಲಿ ಭಾಗಿಯಾದರು. ಜನಪರ ಕಾಳಜಿ ಹೊಂದಿದ್ದ ಅವರು ಶಾಸಕರಾಗಿ, ಸಚಿವರಾಗಿ ನಾಡಿಗೆ ಸಲ್ಲಿಸಿದ ಸೇವೆ ಸದಾ ಸ್ಮರಣೀಯ. ಹಲವು ವರ್ಷಗಳ ಕಾಲ ಜೊತೆಯಾಗಿ ಕೆಲಸ ಮಾಡಿದ್ದ ಆತ್ಮೀಯ ಸಹೋದ್ಯೋಗಿಯನ್ನು ಕಳೆದುಕೊಂಡ ನೋವು ಮನಸ್ಸನ್ನು ಭಾರವಾಗಿಸಿದೆ, ಅವರ ನಿಧನ ನಂಬಲಾಗದ ಸಂಗತಿಯಾಗಿದೆ ಎಂದು ತಿಳಿಸಿದರು. ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ, ಕುಟುಂಬಸ್ಥರಿಗೆ, ಅಭಿಮಾನಿಗಳಿಗೆ ಈ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸಿದರು.

