• ಮೇ 8ಕ್ಕೆ ವಿಜಯಪುರದಲ್ಲಿ ರೈತ ಗರ್ಜನೆ
• ಆಲಮಟ್ಟಿ ಎತ್ತರ ಹೆಚ್ಚಳಕ್ಕೆ ಬೃಹತ್ ಸಮಾವೇಶ
• ದರಬಾರ ಮೈದಾನದಲ್ಲಿ ರೈತರ ಜನಜಾಗೃತಿ ಸಭೆ
• ಸರ್ಕಾರದ ಗಮನ ಸೆಳೆಯಲು ಅನ್ನದಾತರ ಸಜ್ಜು

ಆ್ಯಂಕರ್: ವಿಜಯಪುರ ನಗರದ ದರಬಾರ ಹೈಸ್ಕೂಲ್ ಮೈದಾನದಲ್ಲಿ ಮೇ 8ರಂದು ಬೃಹತ್ ರೈತ ಜನಜಾಗೃತಿ ಸಮಾವೇಶ ಆಯೋಜಿಸಲಾಗಿದ್ದು, ಸಾವಿರಾರು ರೈತರು ಭಾಗವಹಿಸುವ ನಿರೀಕ್ಷೆಯಿದೆ’ ಎಂದು ಕರ್ನಾಟಕ ರಾಜ್ಯ ರೈತ ಸಂಘ–ಹಸಿರು ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಸಂಗಮೇಶ ಸಗರ ತಿಳಿಸಿದರು.
ವಿಜಯಪುರ ನಗರದಲ್ಲಿ ಮಾದ್ಯಮಗೋಷ್ಠಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಆಲಮಟ್ಟಿ ಲಾಲ್ ಬಹಾದ್ದೂರ ಶಾಸ್ತ್ರಿ ಅಣೆಕಟ್ಟಿನ ಎತ್ತರವನ್ನು 519.60 ಮೀಟರ್‌ನಿಂದ 524.256 ಮೀಟರ್‌ಗೆ ಹೆಚ್ಚಿಸುವುದು, ಭೂ ಪರಿಹಾರ ಹಾಗೂ ಪುನರ್ವಸತಿ ಕಲ್ಪಿಸುವುದು, ಐದು ಜಿಲ್ಲೆಗಳಿಗೆ ಸಮಗ್ರ ನೀರಾವರಿ ಒದಗಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಸಮಾವೇಶದಲ್ಲಿ ಮಂಡಿಸಲಾಗುವುದು’ ಎಂದರು. ‘ಮುಳವಾಡ ಸೇರಿದಂತೆ ಏತ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸುವುದು, ಮುಳುಗಡೆ ಪ್ರದೇಶದ ರೈತರಿಗೆ ಬಾಕಿ ಪರಿಹಾರ ನೀಡುವುದು, ಬೆಳೆಗಳಿಗೆ ಬೆಂಬಲ ಬೆಲೆ ಹಾಗೂ ಮಾರುಕಟ್ಟೆ ಸೌಲಭ್ಯ ಒದಗಿಸುವುದು, ವಿದ್ಯುತ್ ಯೋಜನೆ ಮುಂದುವರಿ ಸುವುದು ಸೇರಿದಂತೆ ಹಲವಾರು ಸಮಸ್ಯೆಗಳ ಕುರಿತು ಸರ್ಕಾರದ ಗಮನ ಸೆಳೆಯಲಾಗುವುದು’ ಎಂದು ಹೇಳಿದರು. ಸಮಾವೇಶದಲ್ಲಿ ವಿವಿಧ ಮಠಾ ಧೀಶರು ಸಾನಿಧ್ಯ ವಹಿಸಲಿದ್ದು, ರಾಜ್ಯ ಘಟಕದ ಅಧ್ಯಕ್ಷ ಚೂನಪ್ಪಾ ಪೂಜೇರಿ ಅಧ್ಯಕ್ಷತೆ ವಹಿಸಲಿದ್ದಾರೆ. ಸಾವಿರಾರು ರೈತರು, ತಜ್ಞರು ಹಾಗೂ ಅಧಿಕಾರಿಗಳು ಭಾಗವಹಿಸಿ ಕೃಷಿ ಕುರಿತ ಚರ್ಚೆ ನಡೆಸಲಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ರೈತರಿಗೆ ಸನ್ಮಾನವೂ ನಡೆಯಲಿದೆ’ ಎಂದರು. ರಾಜ್ಯ ಪ್ರಧಾನ ಕಾರ್ಯದರ್ಶಿ ರಾಹುಲ್ ಕುಬಕಡ್ಡಿ, ರಾಜ್ಯ ಉಪಾಧ್ಯಕ್ಷ ಕಲ್ಲು ಸೊನ್ನದ, ರಾಮನಗೌಡ ಪಾಟೀಲ, ದಯಾನಂದ ಕೋಳ್ಳಿ, ಮಹಾದೇವ ಬನಸೋಡೆ ಭಾಗವಹಿಸಿದ್ದರು.

