Vijaypura

ಬೆಂಕಿ ಅವಘಡದಿಂದಾಗಿ ಹಲವು ಅಂಗಡಿಗಳು ಸುಟ್ಟು ಭಸ್ಮ

Share

• ಇಂಡಿ ಪಟ್ಟಣದಲ್ಲಿ ಭೀಕರ ಬೆಂಕಿ ಅವಘಡ.
• ಶಾರ್ಟ್ ಸರ್ಕ್ಯೂಟ್‌ನಿಂದ ಸುಟ್ಟು ಹೋದ ಅಂಗಡಿಗಳು.
• ಅಗ್ನಿಶಾಮಕ ಸಿಬ್ಬಂದಿಯಿಂದ ಕಾರ್ಯಾಚರಣೆ ಯಶಸ್ವಿ.
• ಇಂಡಿ ಶಹರ ಪೊಲೀಸ್ ಠಾಣಾ ವ್ಯಾಪ್ತಿ.

ಅಂಗಡಿಯೊಂದರಲ್ಲಿ ಆಕಸ್ಮಿಕವಾಗಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಹಲವು ಅಂಗಡಿಗಳು ಹಾನಿಗೊಳಗಾದ ಘಟನೆ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ರೈಲ್ವೆ ನಿಲ್ದಾಣದ ಬಳಿ ನಡೆದಿದೆ.
ಅಂಗಡಿಯಲ್ಲಿ ಆಕಸ್ಮಿಕವಾಗಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿ ಅಕ್ಕಪಕ್ಕದಲ್ಲಿನ ಅಂಗಡಿಗಳಿಗೂ ಹಾನಿಯಾಗಿ ವಿವಿಧ ಅಂಗಡಿಗಳಲ್ಲಿನ ವಸ್ತುಗಳು ಹಾನಿಗೊಳಗಾಗಿವೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆಯಿತು. ಇಂಡಿ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Tags:

error: Content is protected !!