Pollution

ಯಾದಗಿರಿ ಜಲಾವೃತ: ಧಾರಾಕಾರ ಮಳೆಗೆ ನಲುಗಿದ ನಗರ, ಅಧಿಕಾರಿಗಳ ವಿರುದ್ಧ ಜನರ ಆಕ್ರೋಶ!

Share

ಯಾದಗಿರಿಯಲ್ಲಿ ವರುಣನ ಅಬ್ಬರ ಜೋರಾಗಿದ್ದು, ಮುಂಜಾನೆಯಿಂದಲೇ ಸುರಿಯುತ್ತಿರುವ ಧಾರಾಕಾರ ಮಳೆಗೆ ಇಡೀ ನಗರವೇ ಜಲಾವೃತಗೊಂಡಿದೆ. ನಗರಸಭೆಯ ಬೇಜವಾಬ್ದಾರಿತನದಿಂದಾಗಿ ಪ್ರಮುಖ ರಸ್ತೆಗಳು ಕೆರೆಯಂತಾಗಿದ್ದು, ಸಾರ್ವಜನಿಕರು ಹಾಗೂ ವಾಹನ ಸವಾರರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ.


ಯಾದಗಿರಿ ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಬೆಳಂ ಬೆಳಗ್ಗೆಯಿಂದಲೇ ವರುಣ ದೇವ ಆರ್ಭಟಿಸುತ್ತಿದ್ದು, ಇಡೀ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮಳೆಯ ಭೀಕರತೆಗೆ ನಗರದ ಪ್ರಮುಖ ರಸ್ತೆಗಳು ಹಾಗೂ ಕೇಂದ್ರ ಬಸ್ ನಿಲ್ದಾಣದ ಆವರಣ ಸಂಪೂರ್ಣವಾಗಿ ನೀರಿನಿಂದ ಆವೃತ್ತವಾಗಿದೆ. ರಸ್ತೆಗಳಲ್ಲೇ ಭಾರಿ ಪ್ರಮಾಣದ ನೀರು ನಿಂತಿರುವುದರಿಂದ ಬೈಕ್ ಹಾಗೂ ಇತರೆ ವಾಹನಗಳು ಜಲದಿಗ್ಬಂಧನಕ್ಕೆ ಒಳಗಾಗಿದ್ದು, ಸವಾರರು ಪರದಾಡುವಂತಾಗಿದೆ.

ಪ್ರತಿ ವರ್ಷ ಮಳೆ ಬಂದಾಗಲೂ ನೀರು ಸರಾಗವಾಗಿ ಹರಿದು ಹೋಗಲು ಯಾವುದೇ ಶಾಶ್ವತ ಮತ್ತು ಅಗತ್ಯ ಕ್ರಮಗಳನ್ನು ಕೈಗೊಳ್ಳದ ನಗರಸಭೆ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅಧಿಕಾರಿಗಳ ಈ ಉದಾಸೀನತೆ ಹಾಗೂ ನಿರ್ಲಕ್ಷ್ಯದ ಧೋರಣೆಯೇ ಇಂದಿನ ದುಸ್ಥಿತಿಗೆ ನೇರ ಕಾರಣ ಎಂದು ಸ್ಥಳೀಯರು ಆಕ್ರೋಶದಿಂದ ಕಿಡಿಕಾರಿದ್ದಾರೆ.

Tags:

error: Content is protected !!