ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ (Yoga for Healthy Ageing) ಎಂಬ ಘೋಷವಾಕ್ಯದೊಂದಿಗೆ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ವಿಜೃಂಭಣೆಯಿಂದ ಆಚರಿಸ ಲಾಯಿತು. ಕರ್ನಾಟಕ ಸರ್ಕಾರದ ಆಯುಷ್ ನಿರ್ದೇಶನಾಲಯ, ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆಯುಷ್ ಇಲಾಖೆ ವಿಜಯಪುರ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಕಾರ್ಯಕ್ರಮವು ನಾಡಗೀತೆಯೊಂದಿಗೆ ಆರಂಭವಾಯಿತು.


ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಆನಂದ ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು, ಯೋಗ ತರಬೇತುದಾರರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದರು.
ಈ ಸಂದರ್ಭದಲ್ಲಿ ಯೋಗದ ಮಹತ್ವ ಹಾಗೂ ಆರೋಗ್ಯಕರ ಜೀವನಶೈಲಿಗೆ ಯೋಗದ ಕೊಡುಗೆಯ ಕುರಿತು ಅರಿವು ಮೂಡಿಸಲಾಯಿತು. ಸಾವಿರಾರು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸಾಮೂಹಿಕ ಯೋಗಾಭ್ಯಾಸದಲ್ಲಿ ಪಾಲ್ಗೊಂಡು ಯೋಗ ದಿನಾಚರಣೆಗೆ ಮೆರುಗು ತಂದರು.
