Dharwad

ಕವಿವಿ ಪ್ರೊಫೆಸರ್ ‌ನಿಂದ ಪಿಹೆಚ್‌ಡಿ ವಿದ್ಯಾರ್ಥಿಗಳಿಗೆ ಕಿರುಕುಳ ಪ್ರಕರಣ… ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಮಾನವ ಸರಪಳಿ ನಿರ್ಮಿಸಿ ಎಬಿವಿಪಿ ಕಿಡಿ

Share

ಪಿ.ಎಚ್‌.ಡಿ ಸಂಶೋಧನಾ ವಿದ್ಯಾರ್ಥಿಗಳಿಗೆ ಪ್ರಾಧ್ಯಾಪಕ ಮಾನಸಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಹಾಗೂ ಆರೋಪಿ ಪ್ರಾಧ್ಯಾಪಕನನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಆಡಳಿತ ಕಚೇರಿ ಎದುರು ಬೃಹತ್‌ ಪ್ರತಿಭಟನೆ ನಡೆಸಿದರು.

ಪಿ.ಎಚ್.ಡಿ ವಿದ್ಯಾರ್ಥಿನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಘನತೆ ಹಾಳು ಮಾಡಿ ಪ್ರೊ.ದೇವರಾಜ ತಂಗುದೊರೈ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಇತರ ಪಿಎಚ್ಚಿ ವಿದ್ಯಾರ್ಥಿಗಳಿಗೆ ಕಿರುಕುಳ ನೀಡಿದ್ದಾನೆ. ಈ ರೀತಿ ಕರ್ನಾಟಕ ವಿಶ್ವವಿದ್ಯಾಲಯದ ಮಾನ ಹರಾಜು ಹಾಕಿದರೂ ಆತನ ಮೇಲೆ ಕವಿವಿ ಆಡಳಿತ ಮಂಡಳಿ ಯಾವುದೇ ಕ್ರಮ ಕೈಗೊಳ್ಳದೇ ಇರುವುದು ಖಂಡನೀಯ ಎಂದು ಕರ್ನಾಟಕ ವಿಶ್ವವಿದ್ಯಾಲಯದ ವಿರುದ್ಧ ಘೋಷಣೆ ಕೂಗುತ್ತ ಎಬಿವಿಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಈ ಕೂಡಲೇ ಆರೋಪಿ ಪ್ರಾಧ್ಯಾಪಕ ಪ್ರೊ.

ದೇವರಾಜ ತಂಗುದೊರೈ ಅಮಾನತು ಮಾಡಬೇಕು. ಆತನ ಮೇಲೆ ಉನ್ನತಮಟ್ಟದ ತನಿಖೆ ನಡೆಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಎಬಿವಿಪಿ ಕಾರ್ಯಕರ್ತರು ಆಗ್ರಹಿಸಿದರು. ಇನ್ನೂ ಕವಿವಿ ಅರಿವೇ ಗುರು ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿ ಎಬಿವಿಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಪ್ರಾಧ್ಯಾಪಕರನ್ನು ಅಮಾನತು ಮಾಡದಿದ್ದರೆ ಮುಂಬರುವ ದಿನಗಳಲ್ಲಿ ಇನ್ನಷ್ಟು ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

Tags:

error: Content is protected !!