hubbali

ಪತ್ನಿಯಿಂದ ಕಿರುಕುಳ ಆರೋಪ: ಡೆತ್ ನೋಟ್ ಬರೆದು ನೇಣಿಗೆ ಶರಣಾದ ಪತಿ..

Share

ಕೌಟುಂಬಿಕ ಕಲಹ, ಪತ್ನಿ ಹಾಗೂ ಪೊಲೀಸರ ಕಿರುಕುಳದ ಆರೋಪದ ನಡುವೆ ವ್ಯಕ್ತಿಯೊಬ್ಬ ಡೆತ್ ನೋಟ್ ಬರೆದು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

ಹುಬ್ಬಳ್ಳಿಯ ಬೆಂಗೇರಿಯ ಹರಿಜನ ಕಾಲೋನಿಯ ನಿವಾಸಿ 39 ವರ್ಷದ ಸಂತೋಷ್ ಅಳ್ಳೂರು ಮೃತ ದುರ್ದೈವಿ. ಮೃತನು ತನ್ನ ಸಾವಿಗೆ ಪತ್ನಿ ಲಲಿತಾ ಅಳ್ಳೂರು ಹಾಗೂ ಮಹಿಳಾ ಠಾಣೆ ಪೊಲೀಸರ ಕಿರುಕುಳ ಕಾರಣ ಎಂದು ಆರೋಪಿಸಿ ಡೆತ್ ನೋಟ್ ಬರೆದಿಟ್ಟು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಮಾಹಿತಿಯ ಪ್ರಕಾರ, ಸುಮಾರು 18 ವರ್ಷಗಳ ಹಿಂದೆ ಸಂತೋಷ್ ಮತ್ತು ಲಲಿತಾ ಪ್ರೀತಿಸಿ ವಿವಾಹವಾಗಿದ್ದು, ದಂಪತಿಗಳಿಗೆ ಮೂವರು ಮಕ್ಕಳು ಇದ್ದಾರೆ. ಸಂತೋಷ್‌ ತನ್ನ ಪತ್ನಿಗೆ ಅಂಗನವಾಡಿಯಲ್ಲಿ ಉದ್ಯೋಗ ದೊರಕುವಂತೆ ಸಹಾಯ ಮಾಡಿದ್ದನು ಎನ್ನಲಾಗಿದೆ.

ಉದ್ಯೋಗ ಖಾಯಂ ಆದ ಬಳಿಕ ಪತ್ನಿಯ ವರ್ತನೆ ಬದಲಾಗಿದೆ ಎಂದು ಆರೋಪಿಸಲಾಗಿದ್ದು, ಇದೇ ವಿಚಾರವಾಗಿ ದಂಪತಿಗಳ ನಡುವೆ ನಿರಂತರವಾಗಿ ಕಲಹ ನಡೆಯುತ್ತಿತ್ತು ಎನ್ನಲಾಗಿದೆ. ಈ ಹಿನ್ನೆಲೆ ಲಲಿತಾ ಪೊಲೀಸ್‌ ಠಾಣೆಗೆ ದೂರು ನೀಡಿದ್ದು, ಜೊತೆಗೆ ವಿಚ್ಛೇದನಕ್ಕೂ ಅರ್ಜಿ ಸಲ್ಲಿಸಿದ್ದಳು ಎಂದು ತಿಳಿದುಬಂದಿದೆ.

ಪತ್ನಿ ತನ್ನೊಂದಿಗೆ ಸಂಸಾರ ನಡೆಸುವುದಿಲ್ಲ ಎಂಬ ಕಾರಣದಿಂದ ಸಂತೋಷ್ ಮನನೊಂದಿದ್ದನು ಎನ್ನಲಾಗುತ್ತಿದೆ. ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದ್ದು, ಕುಟುಂಬಸ್ಥರು ಪತ್ನಿ ಹಾಗೂ ಮಹಿಳಾ ಠಾಣೆಯ ಪೊಲೀಸರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಈ ಸಂಬಂಧ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Tags:

error: Content is protected !!