ಬೆಳಗಾವಿ ನಗರದ ಸಾರ್ವಜನಿಕ ಸ್ಥಳದಲ್ಲಿ ಅಸಹಜವಾಗಿ ವರ್ತಿಸುತ್ತಾ ಸಾರ್ವಜನಿಕರಿಗೆ ಮುಜುಗರ ಉಂಟುಮಾಡುತ್ತಿದ್ದ ಗಾಂಜಾ ಪ್ರಿಯನಿಗೆ ಎಪಿಎಂಸಿ ಪೊಲೀಸರು ಸರಿಯಾದ ಶಾಕ್ ನೀಡಿದ್ದಾರೆ. ಗಾಂಜಾ ಸೇವಿಸಿ ಸಿಕ್ಕಿಬಿದ್ದ ಯುವಕನ ವಿರುದ್ಧ ಕಾರ್ಯಾಚರಣೆ ನಡೆಸಿದೆ.
ದಿನಾಂಕ 18/06/2026 ರಂದು ಬೆಳಗಾವಿಯ ವೈಭವ ನಗರದ ಮೆಜಬಾನ್ ಹಾಲ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಅಸಹಜವಾಗಿ ವರ್ತಿಸುತ್ತಿದ್ದ ಜನತಾ ಪ್ಲಾಟ್ ನಿವಾಸಿ ತನ್ವೀರ ಕಾಸಿಮ್ ಸಯ್ಯದ (22) ಎಂಬ ಯುವಕನನ್ನು ಎಪಿಎಂಸಿ ಠಾಣೆಯ ಎಎಸ್ಐ ಎ.ಪಿ.ಅರಕಟ್ಟಿ ಮತ್ತು ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಆತ ಗಾಂಜಾ (ಮಾದಕ ವಸ್ತು) ಸೇವಿಸಿರುವುದು ದೃಢಪಟ್ಟಿದ್ದು, ಆತನ ವಿರುದ್ಧ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಿದ ಇಡೀ ಪೊಲೀಸ್ ತಂಡದ ಕಾರ್ಯವನ್ನು ಬೆಳಗಾವಿ ನಗರದ ಪೊಲೀಸ್ ಆಯುಕ್ತರು ಹಾಗೂ ಡಿಸಿಪಿಯವರು ಶ್ಲಾಘಿಸಿದ್ದಾರೆ.

