BELAGAVI

ಬೆಳಗಾವಿ: ಆಝಂ ನಗರದಲ್ಲಿ ಆಸೀಫ್ ಸೇಠ್ ಭರ್ಜರಿ ವಿಕಾಸ ಪರ್ವ; ಮುಂಗಾರು ಮಳೆಗೆ ಮುನ್ನವೇ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕರಿಂದ ಅದ್ಧೂರಿ ಚಾಲನೆ

Share

ಬೆಳಗಾವಿಯ ವಿದ್ಯಾಗಿರಿ ಸಮೀಪದ ಆಝಂ ನಗರದ ೧ ಮತ್ತು ೨ನೇ ಕ್ರಾಸ್‌ನಲ್ಲಿ ಬಹುದಿನಗಳ ಬೇಡಿಕೆಯಾಗಿದ್ದ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಆಸೀಫ್ ಸೇಠ್ ಅವರು ಗುದ್ದಲಿ ಪೂಜೆ ನೆರವೇರಿಸಿದ್ದಾರೆ. ಮುಂಗಾರು ಮಳೆ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮವಾಗಿ ಈ ಮಹತ್ವದ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ.


ಬೆಳಗಾವಿಯ ಆಝಂ ನಗರದ ವ್ಯಾಪ್ತಿಯಲ್ಲಿ ಚರಂಡಿ ವ್ಯವಸ್ಥೆಯನ್ನು ಸುಧಾರಿಸುವ ಮೂಲಕ ಮಳೆಗಾಲದಲ್ಲಿ ಎದುರಾಗುತ್ತಿದ್ದ ನೀರು ನಿಲ್ಲುವ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಈ ಅಭಿವೃದ್ಧಿ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿದೆ. ಜೊತೆಗೆ ಸ್ಥಳೀಯ ನಿವಾಸಿಗಳಿಗೆ ಉತ್ತಮ ನೈರ್ಮಲ್ಯ ಸೌಲಭ್ಯಗಳನ್ನು ಒದಗಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಈ ಮಹತ್ವಾಕಾಂಕ್ಷಿ ಯೋಜನೆಯು ಸುದೀರ್ಘಾವಧಿಯಿಂದ ನೆನೆಗುದಿಗೆ ಬಿದ್ದಿದ್ದ ನಾಗರಿಕ ಸಮಸ್ಯೆಗಳನ್ನು ಬಗೆಹರಿಸಲಿದ್ದು, ಸ್ಥಳೀಯ ಸಮುದಾಯಕ್ಕೆ ಸ್ವಚ್ಛ ಹಾಗೂ ಆರೋಗ್ಯಕರ ಜೀವನ ಪರಿಸರವನ್ನು ನಿರ್ಮಿಸಲು ನೆರವಾಗಲಿದೆ ಎಂದು ನಿರೀಕ್ಷಿಸಲಾಗಿದೆ.


ಇನ್ನು ಕಾಮಗಾರಿ ಉದ್ಘಾಟನೆ ವೇಳೆ ಸ್ಥಳೀಯ ನಿವಾಸಿಗಳೊಂದಿಗೆ ಖುದ್ದಾಗಿ ಸಂವಾದ ನಡೆಸಿದ ಶಾಸಕ ಆಸೀಫ್ ಸೇಠ್, ಮೂಲಸೌಕರ್ಯ ಮತ್ತು ನಾಗರಿಕ ಸೌಲಭ್ಯಗಳಿಗೆ ಸಂಬಂಧಿಸಿದ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿದರು. ಕ್ಷೇತ್ರದ ಪ್ರತಿಯೊಂದು ಭಾಗದಲ್ಲೂ ಉತ್ತಮ ಮೂಲಸೌಕರ್ಯ ಹಾಗೂ ಸುಧಾರಿತ ಸಾರ್ವಜನಿಕ ಸೇವೆಗಳನ್ನು ಖಾತರಿಪಡಿಸುವುದು ತಮ್ಮ ಆದ್ಯತೆಯಾಗಿದ್ದು, ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ಶೀಘ್ರ ಇತ್ಯರ್ಥಪಡಿಸುವುದಾಗಿ ಭರವಸೆ ನೀಡಿದರು. ಈ ಉದ್ಘಾಟನಾ ಸಮಾರಂಭದಲ್ಲಿ ಸ್ಥಳೀಯ ಪಾಲಿಕೆ ಸದಸ್ಯರು, ಮುಖಂಡರು ಹಾಗೂ ನೂರಾರು ಸಾರ್ವಜನಿಕರು ಉಪಸ್ಥಿತರಿದ್ದರು.

Tags:

error: Content is protected !!