ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಬುಧವಾರ ಮುಂಜಾನೆ ಡಿವೈಎಸ್ಪಿ ಅವರ ನೇತೃತ್ವದಲ್ಲಿ ಅಥಣಿ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿಶೀಟರ್ಗಳ ಮನೆಗಳ ಮೇಲೆ ದಾಳಿ ನಡೆಸಲಾಯಿತು.


ಈ ವೇಳೆ ರೌಡಿಶೀಟರ್ಗಳ ಮನೆಗಳಿಗೆ ಭೇಟಿ ನೀಡಿ, ಅವರ ಚಟುವಟಿಕೆಗಳ ಬಗ್ಗೆ ಪರಿಶೀಲನೆ ನಡೆಸಿದ ಪೊಲೀಸರು, ಯಾವುದೇ ಕಾನೂನುಬಾಹಿರ ಕೃತ್ಯಗಳಲ್ಲಿ ತೊಡಗಿಕೊಳ್ಳದಂತೆ ಎಚ್ಚರಿಕೆ ನೀಡಿದರು. ಅಲ್ಲದೆ, ಅವರ ಪ್ರಸ್ತುತ ಚಟುವಟಿಕೆಗಳು ಹಾಗೂ ಸಾರ್ವಜನಿಕ ಶಾಂತಿ-ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವ ಯಾವುದೇ ಬೆಳವಣಿಗೆಗಳ ಬಗ್ಗೆ ಮಾಹಿತಿ ಸಂಗ್ರಹಿಸಿದರು.

ಪೊಲೀಸ್ ಇಲಾಖೆಯ ಈ ಕಾರ್ಯಾಚರಣೆ ಅಪರಾಧ ಚಟುವಟಿಕೆಗಳ ನಿಯಂತ್ರಣ ಹಾಗೂ ಸಾರ್ವಜನಿಕರಲ್ಲಿ ಭದ್ರತೆಯ ಭಾವನೆ ಮೂಡಿಸುವ ಉದ್ದೇಶದಿಂದ ಕೈಗೊಳ್ಳಲಾಗಿದೆ.
