hubbali

ಐನೂರು ರೂಪಾಯಿಗಾಗಿ ಜೀವ ಬಲಿ! ಕಲ್ಲಿನಿಂದ ಹೊಡೆದು ಆಟೋ ಚಾಲಕನ ಹತ್ಯೆ

Share

ಕೇವಲ ಐನೂರು ರೂಪಾಯಿ ಸಾಲದ ವಿಚಾರಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವ ಬೆಚ್ಚಿಬೀಳಿಸುವ ಘಟನೆ ಹುಬ್ಬಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಮೃತಪಟ್ಟ ಬಳಿಕ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದೆ.

ಮೃತ ವ್ಯಕ್ತಿಯನ್ನು ಈರಣ್ಣ ಹುರಕಡ್ಲಿ (45) ಎಂದು ಗುರುತಿಸಲಾಗಿದೆ. ಹುಬ್ಬಳ್ಳಿ ನಗರದ ಯಲ್ಲಾಪುರ ಓಣಿ ನಿವಾಸಿಯಾಗಿದ್ದು, ಆಟೋ ಚಾಲಕನಾಗಿ ಜೀವನ ಸಾಗಿಸುತ್ತಿದ್ದ.

ಮಾಹಿತಿಯ ಪ್ರಕಾರ, ಮೃತ ಈರಣ್ಣ, ಆರೋಪಿ ಶಶಿಧರ್ ಹತ್ತಿರ ಐನೂರು ರೂಪಾಯಿ ಸಾಲ ಪಡೆದಿದ್ದ ಎನ್ನಲಾಗಿದೆ. ಇದೇ ಹಣದ ವಿಚಾರಕ್ಕೆ ಇಬ್ಬರ ಮಧ್ಯೆ ವಾಗ್ವಾದ ನಡೆದಿದ್ದು, ಅದು ತೀವ್ರ ಸ್ವರೂಪ ಪಡೆದುಕೊಂಡಿದೆ. ಜೂನ್ 25ರಂದು ನಡೆದ ಗಲಾಟೆಯಲ್ಲಿ ಶಶಿಧರ್ ಕಲ್ಲಿನಿಂದ ಈರಣ್ಣ ಮೇಲೆ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಈರಣ್ಣನನ್ನು ತಕ್ಷಣ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕಳೆದ ರಾತ್ರಿ ಮೃತಪಟ್ಟಿದ್ದಾನೆ.

ಘಟನೆ ಸಂಬಂಧ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿ ಶಶಿಧರ್‌ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Tags:

error: Content is protected !!