arrest

ಬಾಗಲಕೋಟೆ: ಅಕ್ರಮ ಪಡಿತರ ಅಕ್ಕಿ ದಂಧೆಗೆ ಬ್ರೇಕ್; ೨೦ ಕ್ವಿಂಟಲ್ ಅಕ್ಕಿ ಸೇರಿದಂತೆ ಇಬ್ಬರು ವಶಕ್ಕೆ

Share

ಬಾಗಲಕೋಟೆ ಜಿಲ್ಲೆಯಲ್ಲಿ ಅಕ್ರಮ ಪಡಿತರ ಅಕ್ಕಿ ದಂಧೆಗೆ ಕೊನೆಗೂ ಆಹಾರ ಇಲಾಖೆ ಅಧಿಕಾರಿಗಳು ಬ್ರೇಕ್ ಹಾಕಿದ್ದಾರೆ. ಜಿಲ್ಲೆಯ ಹೊಸೂರು ಕ್ರಾಸ್ ಬಳಿ ಎರಡು ಟಾಟಾ ಏಸ್ ವಾಹನಗಳಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಬರೋಬ್ಬರಿ ೨೦ ಕ್ವಿಂಟಲ್ ಪಡಿತರ ಅಕ್ಕಿಯನ್ನು ಜಪ್ತಿ ಮಾಡಲಾಗಿದ್ದು, ಇಬ್ಬರು ಚಾಲಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಹೊಸೂರು ಕ್ರಾಸ್ ಬಳಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ನಡೆಯುತ್ತಿರುವ ಬಗ್ಗೆ ಸಿಕ್ಕ ಖಚಿತ ಮಾಹಿತಿ ಮೇರೆಗೆ ಆಹಾರ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ಜಂಟಿಯಾಗಿ ಜಾಗೃತ ಜಾಲ ಬೀಸಿ ಈ ಯಶಸ್ವಿ ದಾಳಿ ನಡೆಸಿದ್ದಾರೆ. ಎರಡು ಟಾಟಾ ಏಸ್ ವಾಹನಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ತಲಾ ೨೦ ಕ್ವಿಂಟಲ್ ಪಡಿತರ ಅಕ್ಕಿಯನ್ನು ಅಧಿಕಾರಿಗಳು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಇನ್ನು ಘಟನಾ ಸ್ಥಳದಲ್ಲೇ ವಾಹನ ಸಮೇತ ಇಬ್ಬರು ಚಾಲಕರನ್ನು ವಶಕ್ಕೆ ಪಡೆದಿರುವ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಈ ದಂಧೆಯ ಜಾಲ ಎಲ್ಲೆಡೆ ಹರಡಿದ್ದು, ಸದ್ಯ ಬಾಗಲಕೋಟೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗಿದೆ.

Tags:

error: Content is protected !!