bagalkot

ಮಹಾಲಿಂಗಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ: ಇಬ್ಬರು ಅಂತರರಾಜ್ಯ ಕಳ್ಳರ ಬಂಧನ, ₹13.34 ಲಕ್ಷ ಮೌಲ್ಯದ ಚಿನ್ನ-ಮೊಬೈಲ್ ಜಪ್ತಿ!

Share

• ಮಹಾಲಿಂಗಪುರ ಪೊಲೀಸರಿಂದ ಭರ್ಜರಿ ಕಳ್ಳತನ ಪತ್ತೆ
• ಪುರುಷ ಮತ್ತು ಮಹಿಳೆ ಸೇರಿ ಇಬ್ಬರು ಬಂಧನ
• ಮಹಾರಾಷ್ಟ್ರ ಮೂಲದ ಗೋರಕನಾಥ ಜಾಧವ ಅರೆಸ್ಟ್
• ₹13.34 ಲಕ್ಷ ಮೌಲ್ಯದ ಮಾಲು ವಶ
ಸಾರ್ವಜನಿಕರ ನಿದ್ದೆಗೆಡಿಸಿದ್ದ ಸರಣಿ ಮನೆಗಳ್ಳತನ ಹಾಗೂ ಮಾಂಗಲ್ಯ ಸರಗಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಮಹಾಲಿಂಗಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಮಹಾರಾಷ್ಟ್ರ ಮೂಲದ ಖತರ್ನಾಕ್ ಕಳ್ಳ ಹಾಗೂ ಆತನ ಸಹಚರ ಮಹಿಳೆಯನ್ನು ಹೆಡೆಮುರಿ ಕಟ್ಟಿರುವ ಪೊಲೀಸರು, ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ಮೊಬೈಲ್‌ಗಳನ್ನು ಜಪ್ತಿ ಮಾಡಿದ್ದಾರೆ.

ಮಹಾಲಿಂಗಪುರ ಪಟ್ಟಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾರ್ವಜನಿಕರ ಕಣ್ಣಿಗೆ ಮಣ್ಣೆರಚಿ ಮನೆಗಳ್ಳತನ ಮತ್ತು ಮಹಿಳೆಯರ ಮಾಂಗಲ್ಯ ಸರ ದೋಚುತ್ತಿದ್ದ ಇಬ್ಬರು ಖತರ್ನಾಕ್ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ಮಹಾರಾಷ್ಟ್ರ ಮೂಲದ ಗೋರಕನಾಥ ಜಾಧವ ಹಾಗೂ ಮತ್ತೊಬ್ಬ ಮಹಿಳಾ ಆರೋಪಿ ಸೇರಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಸಿದ್ದಾರ್ಥ ಗೋಯಲ್ ಅವರ ಸಮರ್ಥ ಮಾರ್ಗದರ್ಶನದಲ್ಲಿ ಹಾಗೂ ಪಿಎಸ್‌ಐ ಶಾಂತಾ ಹಳ್ಳಿ ನೇತೃತ್ವದ ವಿಶೇಷ ಪೊಲೀಸ್ ತಂಡವು ಈ ಯಶಸ್ವಿ ಕಾರ್ಯಾಚರಣೆ ನಡೆಸಿದೆ. ಬಂಧಿತರಿಂದ ಒಟ್ಟು 13.34 ಲಕ್ಷ ರೂಪಾಯಿ ಮೌಲ್ಯದ 62 ಗ್ರಾಂ ಚಿನ್ನಾಭರಣ ಹಾಗೂ 30 ದುಬಾರಿ ಮೊಬೈಲ್ ಫೋನ್‌ಗಳನ್ನು ಜಪ್ತಿ ಮಾಡಲಾಗಿದೆ. ಇನ್ನು ಕಾರ್ಯಾಚರಣೆಯ ಬಳಿಕ ಸಾರ್ವಜನಿಕ ಸಮ್ಮುಖದಲ್ಲಿ ಕಳೆದುಹೋಗಿದ್ದ ಚಿನ್ನಾಭರಣ ಹಾಗೂ ಮೊಬೈಲ್‌ಗಳನ್ನು ಮೂಲ ವಾರಸುದಾರರಿಗೆ ಅತ್ಯಂತ ಪಾರದರ್ಶಕವಾಗಿ ಹಸ್ತಾಂತರಿಸಲಾಗಿದ್ದು, ಪೊಲೀಸರ ಈ ತ್ವರಿತ ಕಾರ್ಯ ವೈಖರಿಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ.

Tags:

error: Content is protected !!