ಬಳ್ಳಾರಿ ನಗರದ ಎಪಿಎಂಸಿ ಆವರಣದಲ್ಲಿ ಅತಿಯಾದ ವೇಗದಿಂದ ಬಂದ ಬೊಲೆರೋ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ವಾಹನದೊಳಗೆ ಸಿಲುಕಿಕೊಂಡಿದ್ದ ಚಾಲಕನನ್ನು ಸ್ಥಳೀಯರು ತಕ್ಷಣವೇ ಧಾವಿಸಿ ರಕ್ಷಿಸಿದ್ದು, ದೊಡ್ಡ ದುರಂತವೊಂದು ತಪ್ಪಿದಂತಾಗಿದೆ.

ಬಳ್ಳಾರಿ ನಗರದ ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಚಾಲಕನ ಅತಿಯಾದ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ನಿಯಂತ್ರಣ ಕಳೆದುಕೊಂಡ ಬೊಲೆರೋ ರಸ್ತೆ ಮಧ್ಯದಲ್ಲೇ ಪಲ್ಟಿಯಾಗಿದೆ. ವಾಹನ ಪಲ್ಟಿಯಾದ ರಭಸಕ್ಕೆ ಚಾಲಕ ಒಳಗೇ ಸಿಲುಕಿಕೊಂಡು ಒದ್ದಾಡುತ್ತಿದ್ದಾಗ, ಸ್ಥಳದಲ್ಲಿದ್ದ ಸಾರ್ವಜನಿಕರು ಹಾಗೂ ವ್ಯಾಪಾರಿಗಳು ತಕ್ಷಣವೇ ನೆರವಿಗೆ ಧಾವಿಸಿದ್ದಾರೆ. ಸ್ಥಳೀಯರ ಸಕಾಲಿಕ ಸಹಾಯದಿಂದ ಚಾಲಕನನ್ನು ಸುರಕ್ಷಿತವಾಗಿ ವಾಹನದಿಂದ ಹೊರಗೆ ಕರೆತರಲಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಿಲ್ಲದೆ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆ. ಈ ಕುರಿತು ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
