State

ಗೃಹಕಚೇರಿ ‘ಕೃಷ್ಣಾ’ದಲ್ಲಿ ಪೂಜೆ ಸಲ್ಲಿಸಿ ಅಧಿಕಾರ ಸ್ವೀಕರಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

Share

ಕರ್ನಾಟಕದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬುಧವಾರದಂದು ನಗರದ ಕುಮಾರಪಾರ್ಕ್‌ನಲ್ಲಿರುವ ಮುಖ್ಯಮಂತ್ರಿಗಳ ಅಧಿಕೃತ ಗೃಹಕಚೇರಿ ‘ಕೃಷ್ಣಾ’ದಲ್ಲಿ ಅಧಿಕೃತವಾಗಿ ಕಾರ್ಯಾರಂಭ ಮಾಡಿದರು.

ಕಚೇರಿಗೆ ಆಗಮಿಸಿದ ಮುಖ್ಯಮಂತ್ರಿಗಳು, ಮೊದಲಿಗೆ ವಿಶೇಷ ಪೂಜೆ ಹಾಗೂ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸುವ ಮೂಲಕ ಶುಭ ಮುಹೂರ್ತದಲ್ಲಿ ತಮ್ಮ ಆಡಳಿತಾತ್ಮಕ ಜವಾಬ್ದಾರಿಗಳಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪ್ರಮುಖ ಮುಖಂಡರು, ಹಿರಿಯ ಅಧಿಕಾರಿಗಳು ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದು, ಸಿಎಂ ಅವರಿಗೆ ಶುಭ ಹಾರೈಸಿದರು.

ಪೂಜಾ ಕಾರ್ಯಕ್ರಮಗಳ ಬಳಿಕ ಗೃಹಕಚೇರಿಯಲ್ಲಿ ಆಸೀನರಾದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ರಾಜ್ಯದ ಅಭಿವೃದ್ಧಿ ಹಾಗೂ ಸಾರ್ವಜನಿಕರ ಕುಂದುಕೊರತೆಗಳ ನಿವಾರಣೆಗೆ ತಮ್ಮ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.

Tags:

error: Content is protected !!