Uncategorized

ಬೆಳಗಾವಿಯ 18 ಮತಕ್ಷೇತ್ರದಲ್ಲಿ ಸಮಗ್ರ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಆರಂಭ ಬೆಳಗಾವಿ ಉತ್ತರ ಮತಕ್ಷೇತ್ರದಿಂದ ಎಸ.ಐ.ಆರ ಆರಂಭಿಸಿದ ಪಾಲಿಕೆ ಶಾಸಕ ಆಸೀಫ್ ಸೇಠ್ ಮನೆಗೆ ತೆರಳಿ ಫಾರ್ಮ್ ವಿತರಣೆ

Share

ಗಡಿ ಜಿಲ್ಲೆ ಬೆಳಗಾವಿಯ ಒಟ್ಟು 18 ಮತಕ್ಷೇತ್ರಗಳಲ್ಲಿ ಇಂದಿನಿಂದ ಸಮಗ್ರ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಭರದಿಂದ ಆರಂಭಗೊಂಡಿದೆ. ಮಹಾನಗರ ಪಾಲಿಕೆ ಆಯುಕ್ತರ ನೇತೃತ್ವದಲ್ಲಿ ಅಧಿಕಾರಿಗಳು ಸ್ವತಃ ಶಾಸಕರ ಮನೆಗೆ ಭೇಟಿ ನೀಡಿ ಫಾರ್ಮ್ ವಿತರಿಸುವ ಮೂಲಕ ಈ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ.

ಗಡಿ ಜಿಲ್ಲೆಯ ಒಟ್ಟು 18 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯ ಬೃಹತ್ ಕಾರ್ಯ ಆರಂಭವಾಗಿದೆ. ಬೆಳಗಾವಿ ಉತ್ತರ ಮತಕ್ಷೇತ್ರದಲ್ಲಿ ಮಹಾನಗರ ಪಾಲಿಕೆ ಆಯುಕ್ತರಾದ ಕಾರ್ತಿಕ್ ಎಂ. ಹಾಗೂ ಉಪಾಯುಕ್ತ ಉದಯಕುಮಾರ್ ತಳವಾರ್ ಅವರು ಶಾಸಕ ಆಸೀಫ್ ಸೇಠ್ ಅವರ ಮನೆಗೆ ಖುದ್ದಾಗಿ ತೆರಳಿ ಫಾರ್ಮ್ ವಿತರಿಸುವ ಮೂಲಕ ಆನ್‌ಲೈನ್ ಪ್ರಕ್ರಿಯೆಗೆ ಚಾಲನೆ ನೀಡಿದರು. ಅಧಿಕಾರಿಗಳು ಅರ್ಜಿ ಸಲ್ಲಿಸುವ ವಿಧಾನದ ಕುರಿತು ವಿವರವಾದ ಮಾಹಿತಿ ನೀಡಿದರು.
ಜಿಲ್ಲೆಯಾದ್ಯಂತ ಒಟ್ಟು 4,525 ಬಿಎಲ್‌ಓಗಳು ಪ್ರತಿ ಮತದಾರನ ಮನೆ ಮನೆಗೆ ಭೇಟಿ ನೀಡಿ ಈ ಎಸ್‌ಐಆರ್ ಪ್ರಕ್ರಿಯೆಯನ್ನು ನಡೆಸುತ್ತಿದ್ದಾರೆ. ಗಡಿ ಭಾಗವಾಗಿರುವುದರಿಂದ ಮಹಾರಾಷ್ಟ್ರ ಹಾಗೂ ಗೋವಾ ಸೇರಿದಂತೆ ಅನ್ಯ ರಾಜ್ಯಗಳಿಂದ ಮದುವೆಯಾಗಿ ಬಂದಿರುವ ಮಹಿಳೆಯರ ಹೆಸರುಗಳು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಕೈತಪ್ಪದಂತೆ ಜಿಲ್ಲಾಡಳಿತ ಕಟ್ಟುನಿಟ್ಟಿನ ಎಚ್ಚರಿಕೆ ವಹಿಸಿದೆ. ಸ್ಥಳೀಯ ಸಂಸ್ಥೆಗಳ ಸಹಭಾಗಿತ್ವದಲ್ಲಿ ಅರ್ಹರೆಲ್ಲರನ್ನೂ ಪಟ್ಟಿಗೆ ಸೇರಿಸಲು ಬಿಎಲ್‌ಓಗಳು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಫ್ಲೋ

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಅಮಾನ್ ಸೇಠ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Tags:

error: Content is protected !!