Khanapur

ಖಾನಾಪುರದಲ್ಲಿ ‘ಸಹಕಾರ ಸಪ್ತಾಹ’ ಸಂಭ್ರಮ: ವೃಕ್ಷಾರೋಪಣದ ಮೂಲಕ ಪರಿಸರ ಸಂರಕ್ಷಣೆಯ ಸಂದೇಶ

Share

ಕೇಂದ್ರ ಸರ್ಕಾರದ ಸಹಕಾರ ಸಚಿವಾಲಯ ಸ್ಥಾಪನೆಯಾಗಿ ಐದು ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ದೇಶಾದ್ಯಂತ ‘ಸಹಕಾರ ಸಪ್ತಾಹ’ವನ್ನು ಆಚರಿಸಲಾಗುತ್ತಿದೆ. ಇದರ ಅಂಗವಾಗಿ ಖಾನಾಪುರದ ಕೋ-ಆಪರೇಟಿವ್ ಬ್ಯಾಂಕ್ ಆವರಣದಲ್ಲಿ “ಸಹಕಾರದಿಂದ ಸಮೃದ್ಧಿಯತ್ತ” ಎಂಬ ಪರಿಕಲ್ಪನೆಯಡಿ ವೃಕ್ಷಾರೋಪಣ ಕಾರ್ಯಕ್ರಮವನ್ನು ಅತ್ಯಂತ ಉತ್ಸಾಹದಿಂದ ಆಯೋಜಿಸಲಾಗಿತ್ತು.

ಸಹಕಾರ ಇಲಾಖೆ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಬೆಳಗಾವಿ ಜಿಲ್ಲಾ ಸಹಕಾರ ಯೂನಿಯನ್, ಬಿಡಿಸಿಸಿ ಬ್ಯಾಂಕ್, ಸೌಹಾರ್ದ ಸಂಯುಕ್ತ ಸಹಕಾರಿ ಸಂಸ್ಥೆ ಹಾಗೂ ದಿ ಖಾನಾಪೂರ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಇವರ ಸಂಯುಕ್ತ ಆಶ್ರಯದಲ್ಲಿ ಈ ವಿಶೇಷ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಶಾಸಕ ವಿಠ್ಠಲ್ ಹಲಗೇಕರ ಹಾಗೂ ಮಾಜಿ ಶಾಸಕ ಮತ್ತು ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಅರವಿಂದ ಪಾಟೀಲ ಅವರು ಜಂಟಿಯಾಗಿ ಸಸಿ ನೆಡುವ ಮೂಲಕ ವೃಕ್ಷಾರೋಪಣಕ್ಕೆ ಚಾಲನೆ ನೀಡಿದರು. ಈ ವೇಳೆ ವಿವಿಧ ಸಹಕಾರಿ ಸಂಸ್ಥೆಗಳ ಪದಾಧಿಕಾರಿಗಳು, ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಸಸಿಗಳನ್ನು ನೆಟ್ಟು ಪರಿಸರ ಸಂರಕ್ಷಣೆಯ ಸಂದೇಶ ಸಾರಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ವಿಠ್ಠಲ್ ಹಲಗೇಕರ ಮತ್ತು ಅರವಿಂದ ಪಾಟೀಲ ಅವರು, ಸಹಕಾರ ಚಳವಳಿಯ ಮೂಲಕ ಸಮಾಜದ ಸರ್ವಾಂಗೀಣ ಅಭಿವೃದ್ಧಿಯ ಜೊತೆಗೆ ಪರಿಸರವನ್ನು ಕಾಪಾಡುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಕರೆ ನೀಡಿದರು. ಸಹಕಾರ ಕ್ಷೇತ್ರದ ಸಾಮಾಜಿಕ ಬದ್ಧತೆಗೆ ಇಂತಹ ಕಾರ್ಯಕ್ರಮಗಳು ಸಾಕ್ಷಿಯಾಗಿದ್ದು, ಮುಂದಿನ ದಿನಗಳಲ್ಲಿ ಪರಿಸರ ಸಂರಕ್ಷಣೆಗೆ ಮತ್ತಷ್ಟು ಉತ್ತೇಜನ ನೀಡಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ವೇದಿಕೆಯಲ್ಲಿ ಅರ್ಬನ್ ಬ್ಯಾಂಕ್ ಅಧ್ಯಕ್ಷ ಅಮೃತ ಶೇಲಾರ್, ಮಾರುತಿ ಪಾಟೀಲ್, ಮಹಾಂತೇಶ ಕೊಡೋಳ್ಳಿ, ರವಿ ಕಾಡಗಿ, ಅಂಜಲಿ ಕೊಡೋಳ್ಳಿ, ದೇವಪ್ಪ ಗುರವ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

Tags:

error: Content is protected !!