ನಗರದ ಇಬ್ರಾಹಿಂಪುರ ಕಾಜಾಬಾವಿಯಲ್ಲಿ ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸಲು ಗೋಡೌನ್‌ನಲ್ಲಿ ಗೋವುಗಳನ್ನು ಮರೆಮಾಚಿ ಇಡಲಾಗಿದೆ ಎಂಬ ಭಜರಂಗದಳ ಕಾರ್ಯಕರ್ತರು ಇಂದು ಸ್ಥಳಕ್ಕೆ ತೆರಳಿ ಗೋವುಗಳನ್ನು ರಕ್ಷಣೆ ಮಾಡಿದ್ದಾರೆ. ಕಾರ್ಯಕರ್ತರ ಪ್ರಕಾರ, ಎರಡು ಸಾವಿರಕ್ಕೂ ಅಧಿಕ ಗೋವುಗಳನ್ನು ಪತ್ತೆ ಹಚ್ಚಲಾಗಿದೆ ಎಂದು ಹೇಳಲಾಗಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಭಜರಂಗದಳ ಕಾರ್ಯಕರ್ತರು ಕಸಬಾಪೇಟ ಪೊಲೀಸ್ ಠಾಣೆ ಎದುರು ಜಮಾಯಿಸಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪೂರ್ಣ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ಪ್ರತಿಭಟನಾಕಾರರು, ಗೋವುಗಳ ಮೇಲಿನ ಕ್ರೌರ್ಯ ಹಾಗೂ ಅಕ್ರಮ ಸಾಗಾಟದ ಆರೋಪಗಳ ಕುರಿತು ಸೂಕ್ತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದು, ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವವರೆಗೆ ಹೋರಾಟ ಮುಂದುವರಿಯಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
