ಖಾನಾಪೂರ ತಾಲೂಕಿನ ವಿವಿಧ ಗ್ರಾಮೀಣ ಪ್ರದೇಶಗಳಲ್ಲಿ ಮೂಲಸೌಕರ್ಯ ಹಾಗೂ ರಸ್ತೆಗಳ ಅಭಿವೃದ್ಧಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ವತಿಯಿಂದ ಕೆನರಾ ಲೋಕಸಭಾ ಕ್ಷೇತ್ರದ ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಪ್ರಮುಖ ಬೇಡಿಕೆಗಳನ್ನೊಳಗೊಂಡ ಮನವಿ ಪತ್ರವನ್ನು ಸಲ್ಲಿಸಲಾಯಿತು.

ಸಮಿತಿಯ ಪದಾಧಿಕಾರಿಗಳು ಸಲ್ಲಿಸಿದ ಈ ಮನವಿಯಲ್ಲಿ, ಖಾನಾಪೂರ ತಾಲೂಕಿನ ಮೋಹಿಶೇತ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಿಂಪಳೆ, ಮಾಂಜರಪಾಯಿ, ಮಾಚಾಳಿ ಹಾಗೂ ಘಾರ್ಲಿ ಗ್ರಾಮಗಳಲ್ಲಿ ಸುಮಾರು 2 ಕೋಟಿ ರೂಪಾಯಿ ವೆಚ್ಚದಲ್ಲಿ ತುರ್ತಾಗಿ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸಲಾಗಿದೆ. ಇದರೊಂದಿಗೆ, ಹಲಕರ್ಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಡೇವಾಡಿ ಮತ್ತು ಕುಡಚವಾಡ ಗ್ರಾಮಗಳ ಎಸ್.ಸಿ. ಕಾಲನಿಗಳಲ್ಲಿ ವಾಸಿಸುವ ಜನರ ಅನುಕೂಲಕ್ಕಾಗಿ 1 ಕೋಟಿ ರೂಪಾಯಿಗಳ ವಿಶೇಷ ಅನುದಾನವನ್ನು ಮಂಜೂರು ಮಾಡಿ, ಅಲ್ಲಿ ಸಿಸಿ ರಸ್ತೆ ಹಾಗೂ ಸಿಸಿ ಚರಂಡಿಗಳನ್ನು ನಿರ್ಮಿಸುವ ಮೂಲಕ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡಬೇಕೆಂದು ಸಂಸದರಲ್ಲಿ ಪ್ರಮುಖವಾಗಿ ಆಗ್ರಹಿಸಲಾಗಿದೆ.
