Chikkodi

ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕದ ಕೊಡುಗೆ

Share

ವಿದ್ಯಾರ್ಥಿಗಳ ಆರೋಗ್ಯ ಮತ್ತು ಶೈಕ್ಷಣಿಕ ವಾತಾವರಣ ಸುಧಾರಣೆಗೆ ಒತ್ತು ನೀಡುವ ಉದ್ದೇಶದಿಂದ ಚಿಕ್ಕೋಡಿಯ ಸಿಟಿಇ ಸಂಸ್ಥೆಯ ಶ್ರೀಮತಿ ಡಿ.ಕೆ. ಶಹಾ ಕನ್ನಡ ಮತ್ತು ಮರಾಠಿ ಪ್ರಾಥಮಿಕ ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕವನ್ನು ಸಂಸ್ಥೆಯ ಉಪಾಧ್ಯಕ್ಷ ವಿಜಯ ಮಾಂಜೇಕರ ಕೊಡುಗೆಯಾಗಿ ನೀಡಿದರು.

ಶಾಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಘಟಕವನ್ನು ಉದ್ಘಾಟಿಸಿ ಮಾತನಾಡಿದ ವಿಜಯ ಮಾಂಜೇಕರ ವಿದ್ಯಾರ್ಥಿಗಳಿಗೆ ಸುರಕ್ಷಿತ ಮತ್ತು ಶುದ್ಧ ನೀರಿನ ವ್ಯವಸ್ಥೆ ಕಲ್ಪಿಸುವುದು ಮಕ್ಕಳ ಆರೋಗ್ಯ ರಕ್ಷಣೆಗೆ ಅತ್ಯಂತ ಅಗತ್ಯ ಎಂದರು.

ಕಾರ್ಯಕ್ರಮದಲ್ಲಿ ಸಿ.ಟಿ.ಇ ಸಂಸ್ಥೆಯ ಅಧ್ಯಕ್ಷರು, ನಿರ್ದೇಶಕರು, ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು. ಶಾಲೆಯ ಅಭಿವೃದ್ಧಿಗೆ ಸಹಕರಿಸಿದ ದಾನಿಗಳನ್ನು ಇದೇ ವೇಳೆ ಅಭಿನಂದಿಸಲಾಯಿತು.

ಇದೇ ಸಂದರ್ಭದಲ್ಲಿ ಗಣಿತ ವಿಷಯದಲ್ಲಿ ಪಿಎಚ್‌ಡಿ ಪದವಿ ಪಡೆದ ಸ್ವಾತಿ ಎಸ್. ಜೋಶಿ ಹಾಗೂ ಬುಲ್‌ಬುಲ್ ವಿಭಾಗದಲ್ಲಿ ರಾಷ್ಟ್ರಮಟ್ಟದ ‘ಗೋಲ್ಡನ್ ಏರೋ’ ಪ್ರಶಸ್ತಿ ಪಡೆದ ಶ್ರಾವಣಿ ಅಜ್ಜನಕಟ್ಟಿ ಮತ್ತು ಎಚ್.ಎಸ್. ಕುಲಕರ್ಣಿ ಅವರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಆರ.ವಿ.ಕುಲಕರ್ಣಿ,ಅರುಣ ಕುಲಕರ್ಣಿ,ಸತೀಶ ಕುಲಕರ್ಣಿ, ಓಂಕಾರ ಕುಲಕರ್ಣಿ,ಎಸ್ ಜಿ ಜಹಾಗಿರದಾರ,ಮಿಥುನ ದೇಶಪಾಂಡೆ,ವಿಜಯ ಮಾಂಜ್ರೇಕರ,ಸಂಕೇತ ಮಾಂಜ್ರೇಕರ,ಶೋಭಾ ಮಾಂಜ್ರೇಕರ,ಗೌರಿ ಮಾಂಜ್ರೇಕರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Tags:

error: Content is protected !!