Belagavi

ಬೆಳಗಾವಿಯಲ್ಲಿ ಕುಡಿಯುವ ನೀರಿನ ಸಮಸ್ಯೆ: ಜಿಟಿ ಜಿಟಿ ಮಳೆಯಲ್ಲೇ ರಾಕಸಕೊಪ್ಪ ಜಲಾಶಯಕ್ಕೆ ಶಾಸಕ ಅಭಯ್ ಪಾಟೀಲ್ ಹಾಗೂ ಜನಪ್ರತಿನಿಧಿಗಳ ಭೇಟಿ, ಪರಿಶೀಲನೆ

Share

ಬೆಳಗಾವಿ ಮಹಾನಗರದಲ್ಲಿ ದಿನದಿಂದ ದಿನಕ್ಕೆ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುತ್ತಿರುವ ಹಿನ್ನೆಲೆಯಲ್ಲಿ, ಶಾಸಕ ಅಭಯ್ ಪಾಟೀಲ್ ನೇತೃತ್ವದಲ್ಲಿ ಮಹಾಪೌರ ಪ್ರೀತಿ ಕಾಮಕರ್, ಉಪ ಮಹಾಪೌರ ಹನುಮಂತ ಕೊಂಗಾಲಿ, ನಗರಸೇವಕರು ಹಾಗೂ ಮಹಾನಗರ ಪಾಲಿಕೆ ಮತ್ತು ಜಲಮಂಡಳಿ ಅಧಿಕಾರಿಗಳ ತಂಡ ನಗರಕ್ಕೆ ನೀರು ಪೂರೈಸುವ ಮುಖ್ಯ ಮೂಲವಾದ ರಾಕಸಕೊಪ್ಪ ಜಲಾಶಯಕ್ಕೆ ಭೇಟಿ ನೀಡಿ ಜಲಮಟ್ಟದ ಸ್ಥಿತಿಗತಿಯನ್ನು ಪರಿಶೀಲಿಸಿತು. ನಗರದಲ್ಲಿ ನೀರಿನ ಹಾಹಾಕಾರ ಹೆಚ್ಚಾಗಿರುವುದರಿಂದ, ಸುರಿಯುತ್ತಿದ್ದ ಜಿಟಿ ಜಿಟಿ ಮಳೆಯನ್ನೂ ಲೆಕ್ಕಿಸದೆ ಕೊಡೆ ಹಿಡಿದುಕೊಂಡೇ ಜಲಾಶಯದ ಪರಿಸ್ಥಿತಿಯನ್ನು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ವೀಕ್ಷಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಅಭಯ್ ಪಾಟೀಲ್ ಅವರು, ಸದ್ಯದ ಪರಿಸ್ಥಿತಿಯಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಸಮರ್ಪಕವಾಗಿ ನೀರು ಪೂರೈಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು. ನಗರದಲ್ಲಿರುವ ಕೊಳವೆಬಾವಿಗಳನ್ನು ತಕ್ಷಣವೇ ದುರಸ್ತಿಗೊಳಿಸಿ ಸುಧಾರಣೆ ಮಾಡುವುದರ ಜೊತೆಗೆ, ತೀವ್ರ ನೀರಿನ ಸಮಸ್ಯೆಯಿರುವ ವಾರ್ಡ್‌ಗಳಿಗೆ ಟ್ಯಾಂಕರ್‌ಗಳ ಮೂಲಕ ಸಮರ್ಪಕವಾಗಿ ನೀರು ಸರಬರಾಜು ಮಾಡಲು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಮಹತ್ವದ ಸಲಹೆ ಹಾಗೂ ನಿರ್ದೇಶನಗಳನ್ನು ನೀಡಿದರು.

Tags:

error: Content is protected !!