Chikkodi

ಚಿಕ್ಕೋಡಿ ಅಬಕಾರಿ ಡಿವೈಎಸ್ಪಿ ವಿಶ್ವನಾಥ ಗಾಣಿಗೇರ ಮನೆ ಮೇಲೂ ಇಡಿ ದಾಳಿ!!!

Share

ಬೆಳಗಾವಿಯಲ್ಲಿ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ಮಂಜುನಾಥ್ ಮನೆ ಮೇಲಿನ ದಾಳಿಯ ಬೆನ್ನಲ್ಲೇ, ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಇದೀಗ ಮಂಜುನಾಥ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಚಿಕ್ಕೋಡಿ ಅಬಕಾರಿ ಡಿವೈಎಸ್ಪಿ ವಿಶ್ವನಾಥ ಗಾಣಿಗೆರ ಮನೆ ಮೇಲೂ ಇಡಿ ಅಧಿಕಾರಿಗಳು ಭೀಕರ ದಾಳಿ ನಡೆಸಿದ್ದಾರೆ.


ಅಬಕಾರಿ ಇಲಾಖೆಯ ಉನ್ನತ ಅಧಿಕಾರಿಗಳ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ರಾಜ್ಯಾದ್ಯಂತ ತಮ್ಮ ಬೇಟೆಯನ್ನು ಮುಂದುವರಿಸಿದ್ದಾರೆ. ಬೆಳಗಾವಿ ನಗರದ ಬಸವ ಕಾಲನಿಯಲ್ಲಿರುವ ಚಿಕ್ಕೋಡಿ ಅಬಕಾರಿ ಡಿವೈಎಸ್ಪಿ ವಿಶ್ವನಾಥ ಗಾಣಿಗೆರ ಅವರ ನಿವಾಸದ ಮೇಲೆ ಇಂದು ಇಡಿ ಅಧಿಕಾರಿಗಳ ತಂಡ ದಾಳಿ ನಡೆಸಿ, ಮಹತ್ವದ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದೆ. ಈಗಾಗಲೇ ಅಬಕಾರಿ ಹೆಚ್ಚುವರಿ ಆಯುಕ್ತ ಮಂಜುನಾಥ್ ಹಾಗೂ ತುಮಕೂರು ಅಬಕಾರಿ ಎಸ್ಪಿ ಸತೀಶ್ ಕಾಗಲಿ ಅವರ ಮನೆಗಳ ಮೇಲೆ ದಾಳಿ ನಡೆಸಿ ಶಾಕ್ ನೀಡಿದ್ದ ಇಡಿ, ಈಗ ಮಂಜುನಾಥ್ ಅವರ ಆಪ್ತ ಅಧಿಕಾರಿಗಳಿಗೂ ಬಿಸಿ ಮುಟ್ಟಿಸುತ್ತಿದೆ.

Tags:

error: Content is protected !!