Belagavi

ಸಚಿವ ಸತೀಶ್ ಜಾರಕಿಹೊಳಿ ಬಾಮೈದನ ನಿವಾಸದ ಮೇಲೆ ಇಡಿ ದಾಳಿ: ಬೆಂಗಳೂರಿನಲ್ಲಿ ಮಹತ್ವದ ದಾಖಲೆಗಳು ಜಪ್ತಿ!

Share

ಲೋಕೋಪಯೋಗಿ ಇಲಾಖೆಯ ಸಚಿವ ಸತೀಶ್ ಜಾರಕಿಹೊಳಿ ಬಾಮೈದನ ಮನೆ ಮೇಲೆ ಇಡಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಜುನಾಥ್ ಅವರನ್ನು ಬೆಂಗಳೂರಿನ ರೇಸ್‌ಕೋರ್ಸ್ ರಸ್ತೆಯ ಸಮಿಟ್ ಅಪಾರ್ಟ್ಮೆಂಟ್‌ನಲ್ಲಿ ಇಡಿ ಅಧಿಕಾರಿಗಳು ಬುಧವಾರ ಪತ್ತೆ ಹಚ್ಚಿದ್ದಾರೆ.

ಅಕ್ರಮ ಹಣ ವರ್ಗಾವಣೆ ಆರೋಪದಡಿ ಬೆಳಗಾವಿ ಮತ್ತು ಬೆಂಗಳೂರು ಸೇರಿ ಮಂಜುನಾಥಗೆ ಸೇರಿದ ಮನೆಗಳು ಹಾಗೂ ಆಪ್ತರ ಆರು ಸ್ಥಳಗಳಲ್ಲಿ ದಾಳಿ ನಡೆಸಲಾಗಿದೆ. ಬೆಳಗಾವಿಯ ಟಿವಿ ಸೆಂಟರ್‌ನಲ್ಲಿರುವ ನಿವಾಸದಲ್ಲಿ ಮಹತ್ವದ ದಾಖಲೆಗಳು ಪತ್ತೆಯಾಗಿದ್ದು, ಇಡಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಮಾಹಿತಿ ಹೊರಬೀಳುವ ಸಾಧ್ಯತೆ ಇದೆ.

Tags:

error: Content is protected !!