Vijaypura

ತರಕಾರಿ ನೀಡಿ ಸಚಿವ ಎಂ.ಬಿ.ಪಾಟೀಲರಿಗೆ ಕೃತಜ್ಞತೆ ಸಲ್ಲಿಸಿದ ರೈತ ದೇವರಾಜ್

Share

ತರಕಾರಿ ನೀಡಿ ಸಚಿವ ಎಂ.ಬಿ. ಪಾಟೀಲರಿಗೆ ಕೃತಜ್ಞತೆ ಸಲ್ಲಿಸಿದ ರೈತ ದೇವರಾಜ್
ಆ್ಯಂಕರ್: ವಿಜಯಪುರ ಜಿಲ್ಲೆಯ ನೀರಾವರಿ ಅಭಿವೃದ್ಧಿಗೆ ನೀಡಿದ ಕೊಡುಗೆಯನ್ನು ಸ್ಮರಿಸಿ, ತಿಕೋಟಾ ತಾಲೂಕಿನ ಮಲಕನದೇವರಹಟ್ಟಿ ಗ್ರಾಮದ ರೈತ ದೇವರಾಜ್ ರಾಮೋಜಿ ಅವರು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲರಿಗೆ ತಮ್ಮ ತೋಟದಲ್ಲಿ ಬೆಳೆದ ತಾಜಾ ತರಕಾರಿಗಳನ್ನು ನೀಡಿ ಕೃತಜ್ಞತೆ ಸಲ್ಲಿಸಿದರು.

ಜಲ ಸಂಪನ್ಮೂಲ ಸಚಿವರಾಗಿದ್ದ ಅವಧಿಯಲ್ಲಿ ಎಂ.ಬಿ. ಪಾಟೀಲರು ಜಿಲ್ಲೆಯ ನೀರಾವರಿ ಯೋಜನೆಗಳಿಗೆ ವಿಶೇಷ ಒತ್ತು ನೀಡಿದ್ದರಿಂದ ಕೃಷಿಗೆ ಸಾಕಷ್ಟು ಅನುಕೂಲವಾಗಿದೆ ಎಂದು ರೈತ ದೇವರಾಜ್ ಹೇಳಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, “ನನ್ನ ಎರಡು ಎಕರೆ ಜಮೀನಿನಲ್ಲಿ ವಿವಿಧ ತರಕಾರಿಗಳನ್ನು ಬೆಳೆದು ವರ್ಷಕ್ಕೆ ಸುಮಾರು ಆರು ಲಕ್ಷ ರೂಪಾಯಿ ಆದಾಯ ಗಳಿಸುತ್ತಿದ್ದೇನೆ. ಈ ಯಶಸ್ಸಿಗೆ ನೀರಾವರಿ ಸೌಲಭ್ಯವೇ ಪ್ರಮುಖ ಕಾರಣ. ಎಂ.ಬಿ. ಪಾಟೀಲರು ಜಿಲ್ಲೆಗೆ ನೀಡಿದ ನೀರಾವರಿ ಕೊಡುಗೆಯಿಂದ ನನ್ನಂತಹ ಅನೇಕ ರೈತರು ಉತ್ತಮ ಬೆಳೆ ಬೆಳೆಯಲು ಸಾಧ್ಯವಾಗಿದೆ. ಅದಕ್ಕಾಗಿ ಅವರಿಗೆ ಕೃತಜ್ಞತೆ ಸಲ್ಲಿಸುವ ಉದ್ದೇಶದಿಂದ ನನ್ನ ತೋಟದ ತರಕಾರಿಗಳನ್ನು ಕಾಣಿಕೆಯಾಗಿ ನೀಡಿದ್ದೇನೆ” ಎಂದು ತಿಳಿಸಿದರು.

ಈ ವೇಳೆ ಸ್ಥಳೀಯ ಮುಖಂಡರು, ರೈತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದು, ಜಿಲ್ಲೆಯ ನೀರಾವರಿ ಅಭಿವೃದ್ಧಿಯಿಂದ ಕೃಷಿ ಕ್ಷೇತ್ರದಲ್ಲಿ ಆಗಿರುವ ಬದಲಾವಣೆಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

Tags:

error: Content is protected !!