Bagalkot

ಬಾಗಲಕೋಟೆಯಲ್ಲಿ ಉಳುಮೆ ಮಾಡುವಾಗ ಟ್ರ್ಯಾಕ್ಟರ್ ಪಲ್ಟಿಯಾಗಿ ರೈತ ದುರ್ಮರಣ!

Share

ಬಾಗಲಕೋಟೆ ಜಿಲ್ಲೆಯಲ್ಲಿ ರೈತನೊಬ್ಬ ಕೃಷಿ ಭೂಮಿಯಲ್ಲಿ ಕೆಲಸ ಮಾಡುತ್ತಿದ್ದಾಗಲೇ ಯಮನ ರೂಪದಲ್ಲಿ ಬಂದ ಟ್ರ್ಯಾಕ್ಟರ್ ಆತನ ಪ್ರಾಣವನ್ನೇ ಕಸಿದುಕೊಂಡ ಘಟನೆ ಸಂಭವಿಸಿದೆ.

ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ನಂದವಾಡಗಿ ಗ್ರಾಮದಲ್ಲಿ ಉಳುಮೆ ಮಾಡುವಾಗ ಟ್ರ್ಯಾಕ್ಟರ್ ಪಲ್ಟಿಯಾಗಿ ರೈತರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಳಕಲ್ ತಾಲೂಕಿನ ಕಂದಗಲ್ಲ ಗ್ರಾಮದ ನಿವಾಸಿಯಾದ ಖಾಜೇಸಾಬ ಬದ್ದಗೇಸಾಬ ಬಾವಿಕಟ್ಟಿ (53) ಮೃತಪಟ್ಟ ದುರ್ದೈವಿ. ಇಂದು ತಮ್ಮ ಜಮೀನಿನಲ್ಲಿ ಟ್ರ್ಯಾಕ್ಟರ್ ಮೂಲಕ ಭೂಮಿಯನ್ನು ಹದಗೊಳಿಸುತ್ತಿದ್ದಾಗ, ಹಠಾತ್ತಾಗಿ ಕ್ಲಚ್ ನಿಯಂತ್ರಣ ತಪ್ಪಿದ ಪರಿಣಾಮ ಟ್ರ್ಯಾಕ್ಟರ್ ತಲೆಕೆಳಗಾಗಿ ಬಿದ್ದಿದೆ. ಇದರ ಅಡಿಯಲ್ಲಿ ಸಿಲುಕಿದ ಖಾಜೇಸಾಬ ಅವರು ತೀವ್ರ ರಕ್ತಸ್ರಾವದಿಂದ ಕೊನೆಯುಸಿರೆಳೆದಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಇಳಕಲ್ಲ ಗ್ರಾಮೀಣ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tags:

error: Content is protected !!