Belagavi

ಲಕ್ಷ್ಮಣ್ ಸವದಿಗೆ ಸಚಿವ ಸ್ಥಾನ ನೀಡಲು ಗಾಣಿಗ ಸಮಾಜ ಒತ್ತಾಯ: ಕಾಂಗ್ರೆಸ್ ಸರ್ಕಾರಕ್ಕೆ ಉಗ್ರ ಹೋರಾಟದ ಎಚ್ಚರಿಕೆ

Share

ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್ ಸರ್ಕಾರಕ್ಕೆ ಮತ್ತೊಂದು ಸಮಾಜದಿಂದ ಸಚಿವ ಸ್ಥಾನದ ಒತ್ತಡ ಎದುರಾಗಿದೆ. ಮಾಜಿ ಡಿಸಿಎಂ ಹಾಗೂ ಹಾಲಿ ಅಥಣಿ ಶಾಸಕ ಲಕ್ಷ್ಮಣ್ ಸವದಿ ಅವರಿಗೆ ಸಂಪುಟದಲ್ಲಿ ಸ್ಥಾನ ನೀಡಬೇಕು, ಇಲ್ಲದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡುವುದಾಗಿ ಗಾಣಿಗ ಸಮಾಜದ ಮುಖಂಡರು ಬೆಳಗಾವಿಯಲ್ಲಿ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಇಂದು ಬೆಳಗಾವಿಯಲ್ಲಿ ಕರೆಲಾಗಿದ್ದ ಗಾಣಿಗ ಸಮಾಜ ಮುಖಂಡರ ಮಾಧ್ಯಮಗೋಷ್ಟಿಯಲ್ಲಿ ಸಮಾಜದ ಗಣ್ಯರು ಮಾತನಾಡಿದರು. ಸಂಪುಟ ವಿಸ್ತರಣೆಯ ವೇಳೆ ಗಾಣಿಗ ಸಮಾಜದ ಹಿರಿಯರಾದ ಮಾಜಿ ಡಿಸಿಎಂ ಮತ್ತು ಹಾಲಿ ಅಥಣಿಯ ಶಾಸಕ ಲಕ್ಷ್ಮಣ್ ಸವದಿ ಅವರಿಗೆ ಸಚಿವ ಸ್ಥಾನವನ್ನು ನೀಡಬೇಕು. ಕರ್ನಾಟಕದಲ್ಲಿ ಸುಮಾರು 40 ರಿಂದ 50 ಲಕ್ಷ ಜನಸಂಖ್ಯೆಯನ್ನು ಹೊಂದಿದ್ದು, ಸ್ವಾತಂತ್ರ್ಯ ನಂತರ ನಮ್ಮ ಸಮಾಜಕ್ಕೆ ಇಲ್ಲಿಯ ವರೆಗೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸಚಿವ ಸ್ಥಾನವನ್ನು ನೀಡಿಲ್ಲ. ಒಂದು ವೇಳೆ ಗಾಣಿಗ ಸಮಾಜಕ್ಕೆ ಸಚಿವ ಸ್ಥಾನ ನೀಡದಿದ್ದರೇ, ಮುಂಬರುವ ದಿನಗಳಲ್ಲಿ ಗಾಣಿಗ ಸಮಾಜದಿಂದ ಕಠಿಣ ತಿರ್ಮಾನ ಕೈಗೊಳ್ಳುವ ಎಚ್ಚರಿಕೆಯನ್ನು ನೀಡಿದರು.

ಇನ್ನೋರ್ವ ಗಣ್ಯರು ಮಾತನಾಡಿ ಗಾಣಿಗ ಸಮಾಜದ ಅತ್ಯಂತ ಹಿಂದುಳಿದ ಸಮಾಜವಾಗಿದೆ. ಈ ಸಮಾಜದವರೇ ಆದ ಲಕ್ಷ್ಮಣ್ ಸವದಿ ಅವರು ಹಲವಾರು ಜನಪರ ಕಾರ್ಯಗಳನ್ನು ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರ ತನ್ನ ಸಂಪುಟ ವಿಸ್ತರಣೆಯಲ್ಲಿ ಲಕ್ಷ್ಮಣ್ ಸವದಿ ಅವರನ್ನು ಗಂಭೀರವಾಗಿ ಪರಿಗಣಿಸಬೇಕು. ಸಂಪೂರ್ಣ ಸಮಾಜ ಅವರ ಬೆಂಬಲಿಕ್ಕಿದು, ಒಂದು ವೇಳೆ ಸಚಿವ ಸ್ಥಾನ ನೀಡದಿದ್ದರೇ ರಾಜ್ಯಾದ್ಯಂತ ಗಾಣಿಗ ಸಮಾಜದಿಂದ ಉಗ್ರ ಹೋರಾಟ ನಡೆಸಬೇಕಾಗುತ್ತದೆಂದು ಎಚ್ಚರಿಕೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಗಾಣಿಗ ಸಮಾಜದ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿದ್ಧರು.

ಇನ್ನು ಮಾಧ್ಯಮಗೋಷ್ಟಿಯ ಬಳಿಕ ಗಾಣಿಗ ಸಮಾಜದ ಮುಖಂಡರ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿಯನ್ನು ನಗರದ ರಾಣಿ ಚೆನ್ನಮ್ಮ ವೃತ್ತದಿಂದ ನಡೆಸಲಾಯಿತು. ರ್ಯಾಲಿಯ ಮೂಲಕ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಲಾಯಿತು.

ಈ ವೇಳೆ ಸಮಾಜದ ಮುಖಂಡರು ಅಥಣಿ ಶಾಸಕ ಲಕ್ಷ್ಮಣ್ ಸವದಿ ಅವರಿಗೆ ಸಚಿವ ಸಂಪುಟದ ವಿಸ್ತರಣೆಯ ವೇಳೆ ಸಚಿವ ಸ್ಥಾನವನ್ನು ನೀಡಬೇಕೆಂದು ಆಗ್ರಹಿಸಿದರು.

Tags:

error: Content is protected !!