BELAGAVI

ಬೆಳಗಾವಿಯಲ್ಲಿ ಸಿಸಿಬಿ ಜಾಲಕ್ಕೆ ಬಿದ್ದ ಗಾಂಜಾ ಪೆಡ್ಲರ್: 1.85 ಲಕ್ಷ ಮೌಲ್ಯದ ಮಾಲು ಜಪ್ತಿ!

Share

ಬೆಳಗಾವಿ ನಗರದಲ್ಲಿ ಮಾದಕ ವಸ್ತುಗಳ ಮಾರಾಟ ಜಾಲದ ವಿರುದ್ಧ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಗೋಕಾಕ್-ಬೆಳಗಾವಿ ರಸ್ತೆಯಲ್ಲಿ ದಾಳಿ ನಡೆಸಿರುವ ಪೊಲೀಸರು, ಲಕ್ಷಾಂತರ ರೂಪಾಯಿ ಮೌಲ್ಯದ ಗಾಂಜಾ ಸಹಿತ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಹುಕ್ಕೇರಿ ತಾಲೂಕಿನ ಯಲ್ಲಾಪುರದ ಮೃತ್ಯುಂಜಯ ಭೀಮಸೆಪ್ಪ ಜಡಗಿ (19) ಎಂಬಾತ ಕುಂದರಗಿಯ ರವಿ ಎಲಿಬಳ್ಳಿ ಎಂಬಾತನಿಂದ ಗಾಂಜಾ ಪಡೆದು ಮಾರಾಟ ಮಾಡಲು ಸಾಗಿಸುತ್ತಿದ್ದಾಗ, ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪಿಐ ಮಂಜುನಾಥ ನಾಯಿಕ ಹಾಗೂ ಪಿಎಸ್‌ಐ ಮಂಜುನಾಥ ಭಜಂತ್ರಿ ನೇತೃತ್ವದ ತಂಡ ಕರೀಕಟ್ಟಿ ಕ್ರಾಸ್ ಬಳಿ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದೆ. ಬಂಧಿತನಿಂದ 1,50,000 ರೂ. ಮೌಲ್ಯದ 3 ಕೆ.ಜಿ ಗಾಂಜಾ, ಬಜಾಜ್ ಪ್ಲಾಟಿನಾ ಬೈಕ್ ಮತ್ತು ಮೊಬೈಲ್ ಸೇರಿದಂತೆ ಒಟ್ಟು 1,85,000 ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ತಲೆಮರೆಸಿಕೊಂಡಿರುವ ಮತ್ತೊಬ್ಬ ಆರೋಪಿಗಾಗಿ ಶೋಧ ಮುಂದುವರಿದಿದ್ದು, ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಸಿಸಿಬಿ ಪೊಲೀಸರ ಈ ಭರ್ಜರಿ ಕಾರ್ಯವನ್ನು ಬೆಳಗಾವಿ ನಗರ ಪೊಲೀಸ್ ಆಯುಕ್ತರು ಹಾಗೂ ಡಿಸಿಪಿಯವರು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.

Tags:

error: Content is protected !!