ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಇಂಗಳೇಶ್ವರ ಗ್ರಾಮದಲ್ಲಿ ಜಗಜ್ಯೋತಿ ಬಸವಣ್ಣನವರ ಜನ್ಮಸ್ಥಳವು ಕಸದ ರಾಶಿಯಿಂದ ದುರ್ನಾತ ಬೀರುತ್ತಿದೆ. ನಿತ್ಯ ಸಾವಿರಾರು ಪ್ರವಾಸಿಗರು ಭೇಟಿ ನೀಡುವ ಈ ಸ್ಥಳದಲ್ಲಿ ರಸ್ತೆಗಳಲ್ಲಿ ಚರಂಡಿ ನೀರು ಮತ್ತು ಕಸದ ರಾಶಿ ತುಂಬಿರುವುದರಿಂದ ಪ್ರವಾಸಿಗರು ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ಉಂಟಾಗಿದೆ. ಕೂಡಲೇ ಸ್ಥಳೀಯ ಆಡಳಿತವು ಸ್ವಚ್ಛತಾ ಕಾರ್ಯ ಕೈಗೊಂಡು ಪ್ರವಾಸಿಗರಿಗೆ ಅನುಕೂಲ ಕಲ್ಪಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

