ರಾಜ್ಯ ಕಾಂಗ್ರೆಸ್ ಸರಕಾರದ ಎರಡನೇ ಹಂತದ ಸಚಿವ ಸಂಪುಟದಲ್ಲಿ ಬಂಜಾರ ಸಮಾಜದ ಶಾಸಕ ರುದ್ರಪ್ಪ ಲಮಾಣಿಗೆ ಸಚಿವ ಸ್ಥಾನ ನೀಡಬೇಕೆಂದು ಬಂಜಾರ ಸಮಾಜದ ಜಿಲ್ಲಾಧ್ಯಕ್ಷ ಎಂ.ಪಿ.ರಾಠೋಡ್ ಒತ್ತಾಯಿಸಿದರು.
ಸೋಮವಾರ ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಸಿದ್ದರಾಮಯ್ಯ ನೇತೃತ್ವದ ಸರಕಾರದಲ್ಲಿ ವಿಧಾನಸಭೆಯ ಉಪ ಸ್ಪೀಕರ್ ಆಗಿ ಕೆಲಸ ಮಾಡಿರುವ ರುದ್ರಪ್ಪ ಲಮಾಣಿ ಅವರಿಗೆ, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಸಚಿವ ಸಂಪುಟದಲ್ಲಿ ಬಂಜಾರ ಸಮಾಜಕ್ಕೆ ಸಚಿವ ಸ್ಥಾನ ನೀಡದಿದ್ದರೇ ಮುಂಬರುವ ತಾಪಂ, ಜಿಪಂ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸುವುದಾಗಿ ಎಚ್ಚರಿಕೆ ನೀಡಿದರು.
ರಾಜ್ಯದಲ್ಲಿ 60 ಲಕ್ಷಕ್ಕೂ ಜನಸಂಖ್ಯೆ ಹೊಂದಿರುವ ಬಂಜಾರ ಸಮಾಜಕ್ಕೆ ಡಿ.ಕೆ.ಶಿವಕುಮಾರ ಮುಖ್ಯಮಂತ್ರಿ ಅವಧಿಯಲ್ಲಿ ಸಚಿವ ಸಂಪುಟ ದರ್ಜೆಯ ಸ್ಥಾನ ಮಾನ ನೀಡಬೇಕು ಎಂದರು.
ದೇವೇಂದ್ರ ನಾಯಕ, ಪಾಂಡುರಂಗ ನಾಯಕ ಉಪಸ್ಥಿತರಿದ್ದರು.
